ನವದೆಹಲಿ : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಕಳೆದ 140 ದಿನಗಳಿಂದ ಜೈಲಿನಲ್ಲಿದ್ದ ನಟಿ ರಾಗಿಣಿಗೆ ಬಿಡುಗಡೆ ಭಾಗ್ಯ ದೊರೆತಿದೆ. ನಟಿ ರಾಗಿಣಿ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಗೊಂಡಿತ್ತು. ಇದರಿಂದ ರಾಗಿಣಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಸಿ ಸುಪ್ರೀ ಕೋರ್ಟ್ ಜಾಮೀನು ಮಂಜೂರು ಮಾಡಿದೆ



