ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ನಿರೂಪಕಿ ಅನುಶ್ರೀಗೆ ಮಂಗಳೂರಿನ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್ ಶೆಟ್ಟಿ , ತರುಣ್ ಬಂಧಿಸಿದ್ದಾರೆ. ತರುಣ್, ನಿರೂಪಕಿ ಅನುಶ್ರೀ ಹೆಸರು ಬಾಯಿಬಿಟ್ಟಿದ್ದಾನೆ. ಹೀಗಾಗಿ ವಾಟ್ಸಪ್ ಮೂಲಕ ನೋಟಿಸ್ ಕಳುಹಿಸಿದ್ದಾರೆ. ಇದಲ್ಲದೆ ಮಂಗಳೂರಿನಿಂದ ಬೆಂಗಳೂರಿಗೆ ನೋಟಿಸ್ ನೀಡಲು ಸಿಸಿಬಿ ಪೊಲೀಸರು ಬಂದಿದ್ದಾರೆ.
ಕಿಶೋರ್ ಶೆಟ್ಟಿ ಆಪ್ತ ಸ್ನೇಹಿತ ತರುಣ್ ಅನುಶ್ರೀಯ ಜೊತೆ ಪಾರ್ಟಿ ಮಾಡಿದ್ದ. ವಿಚಾರಣೆಯ ಸಂದರ್ಭದಲ್ಲಿ ಈ ವಿಚಾರ ತಿಳಿಸಿದ್ದಕ್ಕೆ ಸಿಸಿಬಿಯಿಂದ ಅನುಶ್ರೀಗೆ ನೋಟಿಸ್ ಜಾರಿ ಮಾಡಲಾಗಿದೆ.