ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮಾಫಿಯದಲ್ಲಿ ಜೈಲು ಸೇರಿರುವ ನಟಿಯರಾದ ಸಂಜನಾ, ರಾಗಿಣಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ನ್ಯಾಯಮೂರ್ತಿ ಶ್ರೀನಿವಾಸ್, ಹರೀಶ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಜಾಮೀನು ತಿರಸ್ಕರಿಸಿದೆ. ಹೀಗಾಗಿ ಇನ್ನು ಕನಿಷ್ಠ 15 ದಿನ ಜೈಲಿ ಗತಿ ನಟಿಯರು ಕಾಲ ಕಳೆಯಬೇಕಿದೆ. ಅ. 24 ರಂದು ಆದೇಶ ಕಾಯ್ದಿರಿಸಿದ್ದ ಕೋರ್ಟ್ ಇಂದು ತೀರ್ಪು ನೀಡಿದೆ.
ಈ ಡ್ರಗ್ಸ್ ಮಾಫಿಯಾಕ್ಕೆ ಸಬಂಧಿಸಿದಂತೆ ಇನ್ನು 3 ಜನ ಆರೋಪಿಗಳು ಸಿಕ್ಕಿಲ್ಲ. ಹೀಗಾಗಿ ತನಿಖೆ ಹಂತದಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕರೆ, ಸಾಕ್ಷಿ ನಾಶ ಮಾಡುವ ಸಾಧ್ಯತೆ ಇದೆ. ಹೀಗಾಗಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.



