Connect with us

Dvg Suddi-Kannada News

ಡ್ರಗ್ಸ್ ಮಾಫಿಯಾ: ಮುತ್ತಪ್ಪ ರೈ ಪುತ್ರ ಸಿಸಿಬಿ ವಶಕ್ಕೆ

ಪ್ರಮುಖ ಸುದ್ದಿ

ಡ್ರಗ್ಸ್ ಮಾಫಿಯಾ: ಮುತ್ತಪ್ಪ ರೈ ಪುತ್ರ ಸಿಸಿಬಿ ವಶಕ್ಕೆ

ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಮಗ ರಿಕ್ಕಿ ರೈ ಮನೆ ಮೇಲೆ ಇಂದ ಬೆಳಗ್ಗೆ ಸಿಸಿಬಿ ದಾಳಿ ಮಾಡಿದೆ.  ಹೆಚ್ಚಿನ ವಿಚಾರಣೆ ಹಿನ್ನೆಲೆ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಡ್ರಗ್ಸ್ ಕೇಸ್‍ನಲ್ಲಿ ಮುತ್ತಪ್ಪ ರೈ ಪುತ್ರ ಭಾಗಿಯಾಗಿರುವ ಆರೋಪದ ಹಿನ್ನೆಲೆ ಸಿಸಿಬಿ ದಾಳಿ ಮಾಡಿದೆ. ಮುತ್ತಪ್ಪ ರೈ ಮಗ ರಿಕ್ಕಿ ಡ್ರಗ್ ಪೆಡ್ಲರ್ಸ್ ರೊಂದಿಗೆ ನೇರ ಸಂಪರ್ಕ ಹೊಂದಿದ್ದ ಆರೋಪ ಹಿನ್ನೆಲೆ ದಾಳಿ ನಡೆದಿದೆ.

ರಾಮನಗರ ಬಿಡದಿಯ ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಎಸಿಬಿ ವೇಣುಗೋಪಾಲ್ ನೇತೃತ್ವದಲ್ಲಿ ರೇಡ್ ಮಾಡಲಾಗಿತ್ತು. ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ಜೊತೆ ರಿಕ್ಕಿ ರೈ ಸಂಪರ್ಕ ಹೊಂದಿದ್ದಾನೆ  ಎಂಬ ಆರೋಪ ಕೇಳಿ ಬಂದಿದೆ.

ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ ದಾಳಿ ಮಾಡಿದೆ. ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿ ಗಳು ಶೋಧ ಕಾರ್ಯ ನಡೆಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top