ದಾವಣಗೆರೆ; ಭದ್ರಾ ಅಚ್ಚುಕಟ್ಟು ಕೊನೆಯ ಭಾಗದವರಿಗೆ ಹಾಗೂ ಕಡಿಯುವ ನೀರನ್ನು ಪೂರೈಸುವ ಸಲುವಾಗಿ ನಾಳೆ (ಏ.17) ಅನಧಿಕೃತ ಪಂಪ್‌ಸೆಟ್ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಭದ್ರಾ ನಾಲಾ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ದಾವಣಗೆರೆ ತಾಲ್ಲೂಕು ಮತ್ತು ಮಾಯಕೊಂಡ ಹೋಬಳಿ ವ್ಯಾಪ್ತಿಯಲ್ಲಿ ಬರುವ ದಾವಣಗೆರೆ ಶಾಖಾ ಕಾಲುವೆ 0.30
ಕಿಮೀ ಯಿಂದ 56.00 ಕಿಮೀವರೆಗೆ ಅನಧಿಕೃತ ಪಂಪ್‌ಸೆಟ್ ತೆರವುಗೊಳಿಸುವ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ಅನಧಿಕೃತವಾಗಿ ನೀರನ್ನು ಎತ್ತಿಕೊಳ್ಳಲು ಅಳವಡಿಸಲಾಗಿರುವ ಪಂಪ್‌ಸೆಟ್‌ಗಳನ್ನು ತಕ್ಷಣ ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ತಪ್ಪಿದಲ್ಲಿ ಕರ್ನಾಟಕ ನೀರಾವರಿ ಕಾಯ್ದೆ ಅಡಿಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ. ಬೆಸ್ಕಾಂ, ಪೊಲೀಸ್,ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಸೂಕ್ತ ಭದ್ರತೆಯೊಂದಿಗೆ ಅನಧಿಕೃತ ಪಂಪ್‌ಸೆಟ್ ತೆರವುಗೊಳಿಸುವಂತೆ ಸೂಚಿಸಲಾಗಿದೆ.



