Connect with us

Dvgsuddi Kannada | online news portal | Kannada news online

ದ್ವಿತೀಯ ಪಿಯುಸಿಯಲ್ಲಿ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

IMG 20240430 143639

ಪ್ರಮುಖ ಸುದ್ದಿ

ದ್ವಿತೀಯ ಪಿಯುಸಿಯಲ್ಲಿ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2024ನೇ ಸಾಲಿನ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಈ ಪುರಸ್ಕಾರ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು Online link: https://bit.ly/ksgea2024pp ಗೆ ಭೇಟಿ ನೀಡಿ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22354783/84, 9902135813 ಸಂಪರ್ಕಿಸಿ.

ಅರ್ಜಿ ಸಲ್ಲಿಸಲು ಈ ಕ್ರಮ ಅನುಸರಿಸಿ

1. ಶೇ. 90%ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮಾತ್ರ Online ನಲ್ಲಿ ಅರ್ಜಿ ಸಲ್ಲಿಸುವುದು.

2. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು ಹಾಗೂ ಸರ್ಕಾರಿ ನೌಕರರ ಸಂಘದ ಸದಸ್ಯರಾಗಿರಬೇಕು.

3. ಸಂಘವು ನಿಗಧಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ Online ನಲ್ಲಿ Upload ಮಾಡುವುದು.

4. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.

5. ಕೋರಿರುವ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು Upload ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

6. ಪಿ.ಯು.ಸಿ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2024

ವಿಶೇಷ ಸೂಚನೆ: ಎಸ್.ಎಸ್.ಎಲ್.ಸಿ. ಮತ್ತು ಸಿ.ಬಿ.ಎಸ್.ಸಿ ಫಲಿತಾಂಶ ಪ್ರಕಟಣೆಗೊಂಡ ನಂತರ ವಿದ್ಯಾರ್ಥಿಗಳ ಪೋಷಕರು ಮೇಲಿನ ಲಿಂಕ್ ಮೂಲಕವೇ ಅರ್ಜಿ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿ: 31-05-2024 ಆಗಿರುತ್ತದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top