Connect with us

Dvgsuddi Kannada | online news portal | Kannada news online

ಸದ್ಯಕ್ಕೆ ರಾಜ್ಯದಲ್ಲಿ ಶಾಲೆ ಆರಂಭ ಇಲ್ಲ: ಸಚಿವ  ಸುರೇಶ್ ಕುಮಾರ್

ಪ್ರಮುಖ ಸುದ್ದಿ

ಸದ್ಯಕ್ಕೆ ರಾಜ್ಯದಲ್ಲಿ ಶಾಲೆ ಆರಂಭ ಇಲ್ಲ: ಸಚಿವ  ಸುರೇಶ್ ಕುಮಾರ್

ಡಿವಿಜಿ ಸುದ್ದಿ, ಮೈಸೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭ ಮಾಡುತ್ತಿಲ್ಲ. ಈಗ ಪಠ್ಯದ ಅನುಮಾನಗಳನ್ನು ಬಗೆಹರಿಸಿಕೊಳ್ಳಲು ಅನುಮತಿ ನೀಡಲಾಗಿದೆ.  ಅದು ಕಡ್ಡಾಯ ಅಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ರಾಜ್ಯದಲ್ಲಿ ಶಾಲೆಗಳನ್ನು  ಸದ್ಯ ಆರಂಭ ಮಾಡುತ್ತಿಲ್ಲ. ಈಗ ಅನುಮತಿ ಸಿಕ್ಕಿರುವುದು ಪಠ್ಯದ ಅನುಮಾನಗಳನ್ನು ಬಗೆಹರಿಸಿಕೊಳ್ಳಲು ಮಾತ್ರ. ಅದು ಕೂಡ ಕಡ್ಡಾಯ ಅಲ್ಲ ಎಂದರು.

ಸೆಪ್ಟೆಂಬರ್ 21 ರಿಂದ ಎಲ್ಲಾ ಶಿಕ್ಷಕರು ಶಾಲೆಗೆ ಬರಬೇಕು. ಸೆಪ್ಟೆಂಬರ್ 21 ರಿಂದ 9, 10, 11, 12ನೇ ತರಗತಿ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಬಗ್ಗೆ ಏನಾದರೂ ಅನುಮಾನ ಇದ್ದರೆ ಸ್ಪಷ್ಟೀಕರಣ ತೆಗೆದುಕೊಳ್ಳಬಹುದು. ಅದು ದೈನಂದಿನ ತಗರತಿ ರೀತಿ ಅಲ್ಲ. ಓದಿದ್ದು ಅರ್ಥವಾಗಿಲ್ಲ ಅಂದರೆ ಶಿಕ್ಷಕರ ಜೊತೆ ಮಾಹಿತಿ ಪಡೆದುಕೊಳ್ಳಬಹುದು ಎಂದರು.

ಶಾಲೆಯನ್ನು ಮತ್ತೆ ಆರಂಭಿಸಲು ಕೇಂದ್ರದ ಅನುಮತಿ ಬೇಕು. ಅನುಮತಿ ನೀಡಿದ ನಂತರವೇ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ಕೇಂದ್ರ ಸರ್ಕಾರ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಶಾಲೆಗೆ ಬರಲು ವಿದ್ಯಾರ್ಥಿಗಳು ಉತ್ಸಾಹಕರಾಗಿದ್ದಾರೆ. ಆದರೆ ಪೋಷಕರಿಗೆ ಇನ್ನೂ ಆತಂಕವಿದೆ. ಹೀಗಾಗಿ ಪೋಷಕರಿಂದ ಕೂಡ ಒಂದು ಅನುಮತಿ ಪತ್ರವನ್ನು ತೆಗೆದುಕೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top