Connect with us

Dvg Suddi-Kannada News

ವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕ ಸ್ಥಗಿತ : ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್

ಪ್ರಮುಖ ಸುದ್ದಿ

ವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕ ಸ್ಥಗಿತ : ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್

ಡಿವಿಜಿ ಸುದ್ದಿ, ಬೆಂಗಳೂರು: ವಿದ್ಯಾಗಮ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಸರ್ಕಾರ ತಾತ್ಕಾಲಿಕವಾಗಿ ಈ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದೆ. ಈ ಮೂಲಕ ಇನ್ಮುಂದೆ  ವಿದ್ಯಾರ್ಥಿಗಳು ಪಾಠದ ಸಮಸ್ಯೆ ಬಗೆಹರಿಸಿಕೊಳ್ಳಲು ಶಾಲೆಗೆ ಹೋಗುವುದು ಸ್ಥಗಿತಗೊಳ್ಳಲಿದೆ.

ಈ ಬಗ್ಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಮ್ಮ ಫೇಸ್ ಬುಕ್ ಖಾತಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.  ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ.

ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ. ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ‌ ಹಾಗೂ ಅದರ ಸಮರ್ಪಕ‌ ವಿಶ್ಲೇಷಣೆ‌ ಪೂರ್ಣಗೊಳ್ಳುವವರೆಗೂ ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಬರೆದುಕೊಂಡಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top