Connect with us

Dvgsuddi Kannada | online news portal | Kannada news online

ದಾವಣಗೆರೆ: ಸರ್ಕಾರದ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಸರ್ಕಾರದ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ:  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಿಗೆ 6ನೇ ತರಗತಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಪ್ರವೇಶ ಲಭ್ಯವಿದೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ದಾಖಲಾತಿಗಾಗಿ ಪೋಷಕರ ಆದಾಯ ಮಿತಿ ರೂ. 2.50 ಲಕ್ಷಗಳಿಗೆ ಮೀರಬಾರದು. ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಏ.22 ರೊಳಗಾಗಿ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳ ಕಛೇರಿ ವೇಳೆಯಲ್ಲಿ ಅರ್ಜಿಗಳನ್ನು ಪಡೆದು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಳಿಗಾಗಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆ ಕೆ.ಆರ್ ಮಾರ್ಕೇಟ್ ದಾವಣಗೆರೆ ಟೌನ್, ಮೊ:7022234663. ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆ ಬೀಡಿ ಲೇಔಟ್, ದಾವಣಗೆರೆ ಟೌನ್, ಮೊ:991682860. ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆ ಹರಿಹರ, ಮೊ:8310828441. ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆ ಜಗಳೂರು, ಮೊ:8310528431. ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆ ಸಂತೆಬೆನ್ನೂರು, ಚನ್ನಗಿರಿ ತಾಲ್ಲೂಕು ಮೊ:9880509916 ಗೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top