ದಾವಣಗೆರೆ: ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ 2022 ರ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಕರಡು ಪಟ್ಟಿ ನ.8 ರಂದು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ, ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಹಾಗೂ ಗೊತ್ತುಪಡಿಸಿದ ಸ್ಥಳಗಳಲ್ಲಿ ಪ್ರಚುರ ಪಡಿಸಲಾಗಿದೆ.
ಮತದಾರರ ಕರಡು ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರುಗಳನ್ನು ವೆಬ್‍ಸೈಟ್ http://ceo.karnataka.gov.in/draftroll_2021 ನಲ್ಲಿ ಮತ್ತು ಸಂಬಂಧಪಟ್ಟ ಕಚೇರಿಗಳಲ್ಲಿ ಅಲ್ಲದೆ ಆಯಾ ಮತಗಟ್ಟೆಗಳಲ್ಲಿಯೂ ಪರಿಶೀಲಿಸಿಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.