ದಾವಣಗೆರೆ: ನಗರದ ಹದಡಿ ರಸ್ತೆಯಲ್ಲಿ 1.50 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಜಿಲ್ಲಾ ಕುರುಬ ವಿದ್ಯಾವರ್ಧಕ ಸಂಘದ ವಾಣಿಜ್ಯ ಸಂಕೀರ್ಣ ಉದ್ಘಾಟನೆಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ದಾವಣಗೆರೆ ಆಗಮಿಸಲಿದ್ದಾರೆ.
ಬೆಳಗ್ಗೆ11 ಗಂಟೆಗೆ ಹೊನ್ನಾಳಿ ತಾಲ್ಲೂಕಿನ ಎಕ್ಕನಹಳ್ಳಿಯಲ್ಲಿ ನಿರ್ಮಿಸಲಾಗಿರುವ 9 ಲಕ್ಷ ವೆಚ್ಚದ 8.75 ಅಡಿ ಎತ್ತರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಅನಾವರಣಗೊಳಿಸಿಸಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ದಾವಣಗೆರೆಯ ಜಯದೇವ ಸರ್ಕಲ್ ಬಳಿಯ ಹದಡಿ ರಸ್ತೆಯಲ್ಲಿನ ವಿದ್ಯಾವರ್ಧಕ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ. ಇದಾದ ಬಳಿಕ ನಗರದ ತ್ರಿಶೂಲ ಕಲಾ ಭವನದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ, ಶಾಸಕ ಎಸ್.ಎ. ರವೀಂದ್ರನಾಥ್, ಎಸ್. ರಾಮಪ್ಪ, ಬೈರತಿ ಸುರೇಶ್, ಮಾಜಿ ಶಾಸಕರಾದ ಎಚ್.ಎಂ ರೇವಣ್ಣ , ಎಸ್ ಎಸ್. ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.



