Connect with us

Dvgsuddi Kannada | online news portal | Kannada news online

ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ; ಅಧಿಕಾರಿಗಳ ಅಮಾನತು: ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ; ಅಧಿಕಾರಿಗಳ ಅಮಾನತು: ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಇಂದು ನಡೆಯಬೇಕಿದ್ದ ಎಫ್.ಡಿ.ಎ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಪರೀಕ್ಷೆಯನ್ನು ಮುಂದೂಡಲಾಗಿದೆ.

ಈ ಪ್ರಕರಣದ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಕರ್ನಾಟಕ ಲೋಕಸೇವಾ ಆಯೋಗದ ಸಿಬ್ಬಂದಿಯೇ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಎಫ್.ಡಿ.ಎ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು. ಅಗತ್ಯವಾದರೆ ಹುದ್ದೆಯಿಂದ ವಜಾ ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ಪ್ರಕರಣ ಕುರಿತು ಮಾಹಿತಿ ಪಡೆದುಕೊಂಡು ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಸಮಗ್ರ ತನಿಖೆಗೆ ಆದೇಶ ನೀಡಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ತನಿಖೆ ಬಳಿಕ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top