Connect with us

Dvgsuddi Kannada | online news portal | Kannada news online

ಎಫ್ ಡಿಎ ಪ್ರಶ್ನೆ ಪತ್ರಿಕೆ ಲೀಕ್ ಕಿಂಗ್ ಪಿನ್ ವಾಣಿಜ್ಯ ತೆರಿಗೆ ಇನ್ಸ್ ಪೆಕ್ಟರ್ ..!

ಪ್ರಮುಖ ಸುದ್ದಿ

ಎಫ್ ಡಿಎ ಪ್ರಶ್ನೆ ಪತ್ರಿಕೆ ಲೀಕ್ ಕಿಂಗ್ ಪಿನ್ ವಾಣಿಜ್ಯ ತೆರಿಗೆ ಇನ್ಸ್ ಪೆಕ್ಟರ್ ..!

ಬೆಂಗಳೂರು: ಇಂದು ನಡೆಯಬೇಕಿದ್ದ ಎಫ್ ಡಿಎ ಪ್ರಶ್ನೆ ಪತ್ರಿಕೆ ಲೀಕ್​ ಪ್ರಕರಣದ ಕಿಂಗ್ ಪಿನ್ ವಾಣಿಜ್ಯ ತೆರಿಗೆ ಇನ್ಸ್​ಪೆಕ್ಟರ್​ ಹಾಗೂ ಕೆಪಿಎಸ್ ಸಿ ಕೆಲ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಸಿಸಿಬಿ ತನಿಖೆಯಿಂದ ಗೊತ್ತಾಗಿದೆ.

ವಾಣಿಜ್ಯ ತೆರಿಗೆ ವಿಚಕ್ಷಣಾ ಇನ್ಸ್​ಪೆಕ್ಟರ್ ಆಗಿರುವ ಚಂದ್ರು ಕೋರಮಂಗಲದ ಕಮರ್ಷಿಯಲ್ ಟ್ಯಾಕ್ಸ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆರೋಪಿ ಚಂದ್ರು ಪ್ರಶ್ನೆ ಪತ್ರಿಕೆ ಪಡೆದು ಸೇಲ್ ಮಾಡುತ್ತಿದ್ದ. ಸದ್ಯ ಈತ ಅರೆಸ್ಟ್ ಆಗಿದ್ದಾನೆ. ಇನ್ನು ಈತನ ಬಳಿ ಪೇಪರ್ ಪಡೆಯಲು ಬಂದಿದ್ದ 5 ಜನರನ್ನು ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ತಡರಾತ್ರಿ 7 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿನ ಉಪಕಾರ್ ಲೇಔಟ್‌ನ ಅಪಾರ್ಟ್‌ಮೆಂಟ್‌ ಮೇಲೆ ಸಿಸಿಬಿ ದಾಳಿ ನಡೆಸಿತ್ತು.ಸಿಸಿಬಿ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ದಾಳಿ ವೇಳೆ 24 ಲಕ್ಷ ರೂಪಾಯಿ, 2 ವಾಹನ, ಪ್ರಶ್ನೆಪತ್ರಿಕೆ ಉತ್ತರಗಳ ಪ್ರತಿಯನ್ನೂ ಜಪ್ತಿ ಮಾಡಲಾಗಿದೆ. ಕಿಂಗ್‌ಪಿನ್ ಚಂದ್ರು, ರಾಚಪ್ಪ ಸೇರಿ 7 ಆರೋಪಿಗಳ ಬಂಧನವಾಗಿದೆ. ಈ ಗ್ಯಾಂಗ್ ಪ್ರಶ್ನೆ ಪತ್ರಿಕೆ ಪರೀಕ್ಷೆಯ ಬರೀ ಉತ್ತರಗಳನ್ನ ಮಾತ್ರ ಅಭ್ಯರ್ಥಿಗಳಿಗೆ ನೀಡಲು ಸಜ್ಜಾಗಿತ್ತು.

ಪ್ರಾಥಮಿಕ ತನಿಖೆ ವೇಳೆ ಆ ಪ್ರತಿಗಳನ್ನು ಬೇರೆ ಬೇರೆ ಜಿಲ್ಲೆಗಳಲ್ಲಿರುವ ಸಹಚರರಿಗೆ ನೀಡಿರುವ ಮಾಹಿತಿ ಸಿಕ್ಕಿದೆ.ಈಗಾಗಲೇ ಕೆಲ ಪರೀಕ್ಷಾ ಅಭ್ಯರ್ಥಿಗಳಿಗೂ ಉತ್ತರ ಪ್ರತಿಗಳನ್ನು ನೀಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಸದ್ಯ ಆರೋಪಿಗಳ ಸಹಚರರು ಸೇರಿದಂತೆ ಪರೀಕ್ಷಾ ಅಭ್ಯರ್ಥಿಗಳಿಗೂ ಕೂಡಾ ಸಿಸಿಬಿ ಅಧಿಕಾರಿಗಳು ಬಲೆ ಬೀಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾತ್ರಿ ಸಿಸಿಬಿ ಕಚೇರಿಯಲ್ಲಿ ಆರೋಪಿಗಳ ವಿಚಾರಣೆ ನಡೆಸಲಾಗಿದೆ. ಪ್ರಕರಣ ಕಿಂಗ್ ಪಿನ್ ಚಂದ್ರು ಜೊತೆ ಇಲಾಖಾ ಮಟ್ಟದಲ್ಲಿ ಯಾರೆಲ್ಲ ಸಂಪರ್ಕದಲ್ಲಿದ್ದಾರೆ ಎಂಬುದರ ಬಗ್ಗೆ ವಿಚಾರಣೆ ನಡೆಸಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});