Connect with us

Dvgsuddi Kannada | online news portal | Kannada news online

ಕೊರೊನಾ ಆರ್ಥಿಕ ಬಿಕ್ಕಟ್ಟಿನಿಂದ ತಡೆ ನೀಡಿದ್ದ FDA ಹುದ್ದೆ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

ಪ್ರಮುಖ ಸುದ್ದಿ

ಕೊರೊನಾ ಆರ್ಥಿಕ ಬಿಕ್ಕಟ್ಟಿನಿಂದ ತಡೆ ನೀಡಿದ್ದ FDA ಹುದ್ದೆ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು :  ಕೊರೊನಾ ಆರ್ಥಿಕ ಬಿಕ್ಕಟ್ಟಿನಿಂದ  FDA ಹುದ್ದೆ ಭರ್ತಿಗೆ ತಡೆ ನೀಡಿದ್ದ ಸರ್ಕಾರ, ಇದೀಗ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ.

ದಿನಾಂಕ 06-07-2020ರಂದು ರಾಜ್ಯದಲ್ಲಿ ಕೋವಿಡ್-19ನಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ 2020-21ನೇ ಸಾಲಿನ ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ತಡೆ ಹಿಡಿಯಲಾಗಿತ್ತು. ಇದೀಗ ದಿನಾಂಕ 06-07-2020ರ ಸುತ್ತೋಲೆಯಿಂದ ವಿನಾಯಿತಿ ನೀಡಿದ್ದು, ಕೆಲವು ಇಲಾಖೆಗಳಿಗೆ ನೇಮಕಾತಿಗಾಗಿ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಕಲ್ಪಿಸಿದೆ.

ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ದಿನಾಂಕ 06-07-2020ರ ಸುತ್ತೋಲೆಯಿಂದ ವಿನಾಯಿತಿ ನೀಡುವಂತೆ ಕೋರಿ ಹಲವಾರು ಇಲಾಖೆಗಳಿಂದ ಪ್ರಸ್ತಾವನೆಗಳನ್ನು ಸ್ವೀಕೃತಗೊಂಡ ಹಿನ್ನಲೆಯಲ್ಲಿ ಸದರಿ ಪ್ರಸ್ತಾವನೆಗಳನ್ನು ಪರಿಶೀಲಿಸಿ, ನೇಮಕಾತಿ ಪೂರ್ವ ಪ್ರಕ್ರಿಯೆಗಳನ್ನು ಮುಂದುವರೆಸಲು ಕೆಲವು ಇಲಾಖೆಗಳಿಗೆ ಸಹಮತಿ ನೀಡಲಾಗಿದೆ.ದಿನಾಂಕ 12-01-2021ರ ಸುತ್ತೋಲೆಯಲ್ಲಿ ಅನುಕಂಪನದ ಆಧಾರದ ಮೇಲೆ ನೇಮಕಗೊಂಡಿರುವ ಅಭ್ಯರ್ಥಿಗಳಿಗೆ ಕೆಲವು ಷರತ್ತುಗಳಿಗೆ ಒಳಪಟ್ಟು ನೇಮಕಾತಿ ಆದೇಶ ನೀಡಲು ಸಹಮತಿ ನೀಡಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ವಿವಿಧ ಇಲಾಖೆಗಳಿಗೆ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನೇಮಕಾತಿ ಪೂರ್ವ ಪ್ರಕ್ರಿಯೆಗಳನ್ನು ಮುಂದುವರೆಸಲು ಸಹಮತಿ ನೀಡಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top