ಪುತ್ತೂರು: ಭಾರೀ ಪ್ರಮಾಣದಲ್ಲಿ ರಸಗೊಬ್ಬರ ಬೆಲೆ ಏರಿಕೆಯಿಂದ ಆತಂಕಕ್ಕೆ ಒಳಗಾಗಿದ್ದ ರೈತರಿಗೆ ನೆಮ್ಮದಿ ನಿಟ್ಟುಸಿರು ಬಿಡುವಂತಾಗಿದೆ. ಸದ್ಯ ರಸಗೊಬ್ಬರ ಬೆಲೆಯಲ್ಲಿ ಯಾವುದೇ ಏರಿಕೆ ಇಲ್ಲ ಎಂದು ಕೇಂದ್ರ ರಾಸಾಯಿನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಭಾರತೀಯ ಉತ್ಪಾದನೆ ಕಂಪನಿಗಳು ಬೆಲೆ ಏರಿಕೆ ಮೇಲೆ ಪರಿಣಾಮ ಬೀರಿದೆ. ಕೇಂದ್ರ ಸರ್ಕಾರ ಹೆಚ್ಚಿನ ಸಬ್ಸಿಡಿ ನೀಡುವ ಮೂಲಕ ರೈತರ ಮೇಲೆ ಬೆಲೆ ಏರಿಕೆ ಪರಿಣಾಮ ಬೀರದಂತೆ ನೋಡಿಕೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಇಪ್ಕೋ, ಎಂಸಿಎಫ್, ಟಿಪ್ಕೋ, ಐಸಿಎಲ್, ಎನ್ ಎಫ್ ಎಲ್ ಘಟಕಗಳಿಗೆ ರಸಗೊಬ್ಬರದ ಬೆಲೆಯಲ್ಲಿ ಯಾವುದೇ ಪ್ರಮಾಣದಲ್ಲಿ ಏರಿಕೆ ಮಾಡದಂತೆ ಸೂಚಿಸಲಾಗಿದೆ ಎಂದರು.