ನವದೆಹಲಿ: ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಸಂತ್ರಸ್ತರ ನೆರವಿಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿ ಅಡಿ 577.84 ಕೋಟಿ ಪರಿಹಾರ ಮಂಜೂರು ಮಾಡಿದೆ.
ಕೇಂದ್ರದ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಮಿತಿ ಸಭೆ ಬಳಿಕೆ ೀ ನಿರ್ಧಾರ ಕೈಗೊಳ್ಳಲಾಯಿತು. ಕರ್ನಾಟಕ ಹೊರತುಪಡಿಸಿ ಇತರ ಐದು ರಾಜ್ಯಗಳಿಗೂ ನೈಸರ್ಗಿಕ ವಿಕೋಪ ಪರಿಹಾರ ಒದಗಿಸಲು ನಿರ್ಧರಿಸಲಾಗಿದೆ. ಈ ಬಾರಿಯ ಮುಂಗಾರು ರಾಜ್ಯದಾದ್ಯಂತ ಭಾರಿ ಪ್ರವಾಹದಿಂದ ನಷ್ಟ ಉಂಟಾಗಿತ್ತು. ಇದೀಗ ಕೇಂದ್ರ ಸರ್ಕಾರ ನೆರವು ಘೋಷಣೆ ಮಾಡಿದೆ.
ಇದೇ ವೇಳೆ ಪ್ರವಾಹದಿಂದ ತತ್ತರಿಸಿದ್ದ ಪಶ್ಚಿಮ ಬಂಗಾಳ, ಒಡಿಶಾ ರಾಜ್ಯಗಳಿಗೆ ಕ್ರಮವಾಗಿ 2707.77 ಹಾಗೂ 128.33 ಕೋಟಿ ಒದಗಿಸಲಾಗಿದೆ. ಮಧ್ಯಪ್ರದೇಶಕ್ಕೆ 611.61 ಕೋಟಿ ,ಮಹಾರಾಷ್ಟ್ರ, ಸಿಕ್ಕಿಂ ರಾಜ್ಯಗಳಿಗೂ ಪರಿಹಾರ ಮಂಜೂರು ಮಾಡಲಾಗಿದ್ದು, ಎಲ್ಲ ರಾಜ್ಯಗಳಿಗೂ ಸೇರಿ ಒಟ್ಟು 4381.88 ಕೋಟಿ ಒದಗಿಸಲಾಗುತ್ತಿದೆ.



