Connect with us

Dvgsuddi Kannada | online news portal | Kannada news online

ದಾವಣಗೆರೆ; ಜಿಎಂಐಟಿ 48 ವಿದ್ಯಾರ್ಥಿಗಳು ಸಂದರ್ಶನದಲ್ಲಿ ಆಯ್ಕೆ; ಪ್ರಸಕ್ತ ಸಾಲಿನಲ್ಲಿ 507 ಜಾಬ್ ಆಫರ್ಸ್

ದಾವಣಗೆರೆ

ದಾವಣಗೆರೆ; ಜಿಎಂಐಟಿ 48 ವಿದ್ಯಾರ್ಥಿಗಳು ಸಂದರ್ಶನದಲ್ಲಿ ಆಯ್ಕೆ; ಪ್ರಸಕ್ತ ಸಾಲಿನಲ್ಲಿ 507 ಜಾಬ್ ಆಫರ್ಸ್

ದಾವಣಗೆರೆ: ಜಿಎಮ್ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ 48 ವಿದ್ಯಾರ್ಥಿಗಳು ಪೇಸ್ ಡಿಟಿಟೆಕ್ ಇನ್ಫ್ರಾ ಪ್ರೈ ಲಿ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಗಳಾಗಿ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮೂಲಕ ಪ್ರಸಕ್ತ 2022-23 ರ ಸಾಲಿನಲ್ಲಿ ಇದುವರೆಗೂ 507 ಜಾಬ್ ಆಫರ್ಸ್ ಸ್ವೀಕರಿಸಿದ್ದು, ಇನ್ನೂ 15 ಕಂಪನಿಗಳ ಆಯ್ಕೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದರು.

ಈಗಿನ ಆರ್ಥಿಕ ಹಿಂಜರಿತದ ಸಮಯದಲ್ಲೂ ಜಿಎಂಐಟಿ ಕಾಲೇಜು ವಿದ್ಯಾರ್ಥಿಗಳಿಗೆ ಸಾಕಷ್ಟು ಉದ್ಯೋಗವಕಾಶವನ್ನು ಒದಗಿಸಿದೆ. ಆ ಮೂಲಕ ಮಧ್ಯ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಉದ್ಯೋಗವಕಾಶ ನೀಡಿದ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಇದೇ ವೇಳೆ ತಿಳಿಸಿದರು.

ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಆದ ಶ್ರೀ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ ಶ್ರೀ ವೈಯು ಸುಭಾಷ್ ಚಂದ್ರ, ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥರಾದ ಡಾ ಪ್ರವೀಣ್ ಜೆ, ಡಾ ಕವಿತಾ ಕೆಜೆ, ಪ್ರೊ ಸಂಪತ್ ಕುಮಾರ್, ಪ್ರೊ ಹನುಮಂತರಾಜು ಮತ್ತು ಅಧ್ಯಾಪಕ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top