ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ತುಂಗಾ ಎಡದಂಡೆ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.
ಹಾವೇರಿ ತಾಲ್ಲೂಕಿನ ನೆಗಳೂರು ಗ್ರಾಮದ ಪ್ರಕಾಶ ಬನ್ನಿಮಟ್ಟಿ (40) ಮತ್ತು ಸಿದ್ದನಗೌಡ ಬಿಷ್ಟನಗೌಡರ (45) ಎಂದು ಗುರುತಿಸಲಾಗಿದೆ.
ಹಾವೇರಿಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯ್ತಿ ಮತ ಎಣಿಕೆ ಹಿನ್ನೆಲೆಯಲ್ಲಿ ಕನವಳ್ಳಿ ಪರಮೇಶ್ವರ ದೇವಾಲಯದಲ್ಲಿ ಪೂಜೆ ಮಾಡಿಸಿಕೊಂಡು ಹಾವೇರಿಗೆ ಬರುವ ಸಂದರ್ಭ ದುರ್ಘಟನೆ ಸಂಭವಿಸಿದೆ.
ಪ್ರಕಾಶ ಬನ್ನಿಮಟ್ಟಿ ಅವರು ನೆಗಳೂರ ಗ್ರಾ.ಪಂ. ಮೊದಲನೇ ವಾರ್ಡಿನ ಅಭ್ಯರ್ಥಿ ಚನ್ನಬಸಪ್ಪ ಬನ್ನಿಮಟ್ಟಿ ಅವರ ಪುತ್ರ ಎನ್ನಲಾಗಿದೆ.ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ