Connect with us

Dvgsuddi Kannada | online news portal | Kannada news online

Breaking news : ಮೂರು ವಾರಗಳಲ್ಲಿ ಗ್ರಾಮ ಪಂಚಾಯತಿ ವೇಳೆಪಟ್ಟಿ ತಯಾರಿಸುವಂತೆ ಹೈ ಕೋರ್ಟ್ ಸೂಚನೆ..!

ಪ್ರಮುಖ ಸುದ್ದಿ

Breaking news : ಮೂರು ವಾರಗಳಲ್ಲಿ ಗ್ರಾಮ ಪಂಚಾಯತಿ ವೇಳೆಪಟ್ಟಿ ತಯಾರಿಸುವಂತೆ ಹೈ ಕೋರ್ಟ್ ಸೂಚನೆ..!

ಬೆಂಗಳೂರುಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಮೂರು ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ‌ ನೇತೃತ್ವದ ವಿಭಾಗೀಯ ಪೀಠ ಆದೇಶ ಹೊರಡಿಸಿದೆ.ಚುನಾವಣಾ ಆಯೋಗ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯುವ ಮೊದಲು ಚುನಾವಣೆ ನಡೆಸುವ ಸಾಂವಿಧಾನಿಕ ಆದೇಶವನ್ನು ಪಾಲಿಸುವ ಸ್ವತಂತ್ರ ಸಂಸ್ಥೆಯಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರವು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸಿಬ್ಬಂದಿಯ ಅಗತ್ಯವಿದ್ದರೆ ಚುನಾವಣಾ ಆಯೋಗ ರಾಜ್ಯಪಾಲರನ್ನು ಸಂಪರ್ಕಿಸಬಹುದು ಎಂದು ಹೇಳಿದೆ.ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಬೇಕು ಎಂದು ರಾಜ್ಯ ಸರ್ಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ ಆಯೋಗ ತನ್ನ ವೇಳಾಪಟ್ಟಿಯ ಪ್ರಕಾರ, ಕೋವಿಡ್ ಮಾರ್ಗಸೂಚಿಗಳೊಂದಿಗೆ ಚುನಾವಣೆ ನಡೆಸುವ ನಿರ್ಧಾರ ತೆಗೆದುಕೊಂಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top