ದಾವಣಗೆರೆ: ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್) ಇವರು ಐ.ಟಿ.ಐ. (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಶೀಟ್ ಮೆಟಲ್ ವರ್ಕರ್, ಫೌಂಡ್ರಿಮನ್, ಎಲೆಕ್ಟ್ರೀಷಿಯನ್, ವೆಲ್ಡರ್ & ಅಔPಂ) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸದೆ.
ಅರ್ಜಿ ನಮೂನೆಯನ್ನು ದಾವಣಗೆರೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಡಿ.27 ಸಂಜೆ 5 ಗಂಟೆಯೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬಿ-ಬ್ಲಾಕ್, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು. ಅಭ್ಯರ್ಥಿಗಳು ಅಪ್ರೆಂಟಿಶಿಪ್ ವೆಬ್‍ಸೈಟ್‍ನಲ್ಲಿ (apprenticeshipindia.org/candidate-registration ನೋಂದಾಯಿಸಿ, ಕಡ್ಡಾಯವಾಗಿ ನೋಂದಣಿ ಸಂಖ್ಯೆಯನ್ನು ತರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ, ದಾವಣಗೆರೆ (ದೂರವಾಣಿ ಸಂಖ್ಯೆ:08192-259446) ಇವರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



