ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ಅನಂತನಹಳ್ಳಿ ಬಳಿ ನಿನ್ನೆ ತಡ ರಾತ್ರಿ (ಅ.11) ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರ ಪರಿಣಾಮ ಬಸ್ ನಲ್ಲಿದ್ದ 16 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಖಾಸಗಿ ಬಸ್ ಹಡಗಲಿಯಿಂದ ಬೆಂಗಳೂರಿಗೆ ಹೊರಟಿತ್ತು. ತಡ ರಾತ್ರಿ 12 ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಡೆದಿದು ಪಲ್ಟಿಯಾಗಿ ಬಿದ್ದಿದೆ. ಬಸ್ ನಲ್ಲಿದ್ದ 45 ಜನರ ಪೈಕಿ 16 ಜನ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



