Connect with us

Dvgsuddi Kannada | online news portal | Kannada news online

ಕಲುಷಿತ ನೀರು ಸೇವಿಸಿ ಇಬ್ಬರು ಸಾವು: 15‌ ಜನ ಅಸ್ವಸ್ಥ; ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು

ಹರಪನಹಳ್ಳಿ

ಕಲುಷಿತ ನೀರು ಸೇವಿಸಿ ಇಬ್ಬರು ಸಾವು: 15‌ ಜನ ಅಸ್ವಸ್ಥ; ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು

ಹರಪನಹಳ್ಳಿ; ತಾಲ್ಲೂಕಿನ ಟಿ. ತುಂಬಿಗೆರೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟ ಘಟನೆ ನಡೆಸಿದೆ.15 ಮಂದಿ ಅಸ್ವಸ್ಥರಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರನ್ನ ಬೋವಿ ಸುರೇಶ್ (35) ಹಾಗೂ ಮಹಾಂತೇಶ್ ( 45) ಎಂದು ಗುರುತಿಸಲಾಗಿದೆ. 15 ಮಂದಿಗೆ ತೀವ್ರ ವಾಂತಿ ಭೇದಿ ಕಾಣಿಸಿಕೊಂಡಿದ್ದು, ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಕ್ಕೆ ಕುಡಿಯುವ ನೀರಿನ ಪೂರೈಸುವ ಪೈಪ್ ಒಡೆದು ಕೊಳಚೆ ನೀರು ಸೇರಿದ್ದರಿಂದ ಅವಘಡ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದು, ತಾಲೂಕು ಆರೋಗ್ಯಾಧಿಕಾರಿ ಪೃಥ್ವಿ ಹಾಗೂ ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಷಣ್ಮುಖಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಇದಲ್ಲದೆ ಹೊಸದಾಗಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸುವಂತೆ ಆಗ್ರಹಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

To Top