Connect with us

Dvgsuddi Kannada | online news portal | Kannada news online

ಹರಪನಹಳ್ಳಿ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ; ಕಾಂಗ್ರೆಸ್ ಬೆಂಬಲಿಸುವ ಸಾಧ್ಯತೆ..?

n499586022168406067820871c7f92d28c5203802c2c639c035f0757c0ad4daba0643600d6822017ee8dfac

ಹರಪನಹಳ್ಳಿ

ಹರಪನಹಳ್ಳಿ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ; ಕಾಂಗ್ರೆಸ್ ಬೆಂಬಲಿಸುವ ಸಾಧ್ಯತೆ..?

ಬೆಂಗಳೂರು; ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಭರ್ಜರಿ ಜಯ ಗಳಿಸಿದ ನಂತರ ಶಾಸಕಿ ಲತಾ ಮಲ್ಲಿಕಾರ್ಜುನ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಲತಾ ಮಲ್ಲಿಕಾರ್ಜುನ ಅವರು ಮಾಜಿ ಸಚಿವ, ಸಿದ್ದರಾಮಯ್ಯ ಆಪ್ತರಾಗಿದ್ದ ಎಂ.ಪಿ ಪ್ರಕಾಶ್‌ ಅವರ ಮಗಳಾಗಿದ್ದಾರೆ.ಅವರು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದಕ್ಕೆ ಪಕ್ಷೇತರ ಅಭ್ಯರ್ಥಿ ಆಗಿದ್ದರು.

ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, ಹರಪನಹಳ್ಳಿ ಕ್ಷೇತ್ರದಿಂದ ವಿಧಾನಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಲತಾ ಮಲ್ಲಿಕಾರ್ಜುನ ಅವರು ಇಂದು ನನ್ನನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರಿಗೆ ಶುಭ ಹಾರೈಸಿದೆ ಎಂದು ತಿಳಿಸಿದ್ದಾರೆ. ಶಾಸಕರಾಗಿ ಆಯ್ಕೆಯಾಗಿರುವ ಲತಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆ ಇದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 224 ಸದಸ್ಯ ಬಲದಲ್ಲಿ ಕಾಂಗ್ರೆಸ್ 135 ಸ್ಥಾನ ಗಳಿಸುವ ಮೂಲಕ ಜಯ ತನ್ನದಾಗಿಸಿಕೊಂಡಿದೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷ ಹಿಮಾಚಲ ಪ್ರದೇಶ ಬಳಿಕ ಕರ್ನಾಟಕ ರಾಜ್ಯ ಕಳೆದುಕೊಂಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

To Top