ಹರಪನಹಳ್ಳಿ: ತಾಲ್ಲೂಕಿನ ಉಪ ವಿಭಾಗಧಿಕಾರಿ ನಕಲಿ ಫೇಸ್ ಬುಕ್ ಖಾತೆ ತೆರೆದು ದೇಣಿಗೆ ಸಂಗ್ರಹಿದ್ದಾರೆ.
ಈ ಬಗ್ಗೆ ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ್ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದ ವಂಚಕರು ದೇಣಿಗೆ ಸಂಗ್ರಹಿಸಿರುವುದು ಗೊತ್ತಾಗಿದೆ. ಈ ಎಸಿ ಪ್ರಸನ್ನಕುಮಾರ್ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸೈಬರ್ ಅಪರಾಧ ವಿಭಾಗಕ್ಕೆ ಗುರುವಾರ ದೂರು ನೀಡಿದ್ದಾರೆ.
ನನ್ನ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ದೇಣಿಗೆ ಸಂಗ್ರಹಿಸಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ನನ್ನ ವೈಯಕ್ತಿಕ ಭಾವಚಿತ್ರಗಳನ್ನು ಅಪ್‌ಲೋಡ್ ಮಾಡಿದ್ದಾರೆ. ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ, ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. .