ಡಿವಿಜಿ ಸುದ್ದಿ, ಉಚ್ಚಂಗಿದುರ್ಗ: ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದ ಉಚ್ಚೆಂಗೆಮ್ಮದೇವಿ ದೇವಸ್ಥಾನ ಹುಂಡಿ ಎಣಿಕೆಯಲ್ಲಿ 16,02,845 ರೂಪಾಯಿಗಳು ಸಂಗ್ರಹವಾಗಿದೆ.
ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ರ ವರೆಗೆ ನಡೆದ ಎಣಿಕೆ ಕಾರ್ಯದಲ್ಲಿ ಮುಜರಾಯಿ ಇಲಾಖೆ,ಕಂದಾಯ ಇಲಾಖೆ,ದೇವಸ್ಥಾನದ ಸಿಬ್ಬಂದಿಗಳು ಎಣಿಕೆಯಲ್ಲಿ ತೊಡಗಿದ್ದರು. ಉಚ್ಚೆಂಗೆಮ್ಮ ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಯಿತು ಎಂದು ಬಳ್ಳಾರಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಆಯುಕ್ತರಾದ ಎಂ.ಎಚ್ ಪ್ರಕಾಶ್ ರಾವ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಳ್ಳಾರಿ ಕನಕದುರ್ಗಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ , ಉಪ ತಹಶೀಲ್ದಾರ್ ಫಾತಿಮಾ, ಬ್ಯಾಂಕ್ ವ್ಯವಸ್ಥಾಪಕ ಸೋಮಶೇಖರ್, ದೇವಸ್ಥಾನದ ಸಮಿತಿ ಮಾಜಿ ಅಧ್ಯಕ್ಷ ಕೆಂಚ್ಚಪ್ಪ ಗ್ರಾಮ ಲೆಕ್ಕಾಧಿಕಾರಿಗಳು, ಅರ್ಚಕರು, ಗುಮಾಸ್ತ ರಮೇಶ್ ಉಪಸ್ಥಿತರಿದ್ದರು.