ಉಚ್ಚಂಗಿದುರ್ಗ: ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದ ಉಚ್ಚೆಂಗೆಮ್ಮ ದೇವಿ ದೇವಸ್ಥಾನದಲ್ಲಿ ಫೆ.06ರಂದು ಕಾಣಿಕೆ ಹುಂಡಿ ಎಣಿಕೆ ನಡೆಯಿತು. ಒಟ್ಟು 30,39,070 ಹಣ ಸಂಗ್ರಹವಾಗಿದೆ ಎಂದು ಬಳ್ಳಾರಿ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಇಲಾಖೆ ಆಯುಕ್ತ ಎಂ.ಎಚ್. ಪ್ರಕಾಶ್ ರಾವ್ ಮಾಹಿತಿ ನೀಡಿದ್ದಾರೆ.
ಹುಂಡಿ ಎಣಿಕೆ 09 ರಿಂದ ರಾತ್ರಿ 08 ಗಂಟೆ ವರೆಗೆ ನಡೆಯಿತು. ಎಣಿಕೆ ಕಾರ್ಯದಲ್ಲಿ ಮುಜರಾಯಿ ಇಲಾಕೆ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು. ಕಳೆದ ಐದು ತಿಂಗಳಲ್ಲಿ 30.39 ಲಕ್ಷ ಹಣ ಸಂಗ್ರಹವಾಗಿದೆ. ಸಂಗ್ರಹವಾದ ಹಣವನ್ನು ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನ ಕಾರ್ಯ ನಿರ್ವಾಹಕ ಅಧಿಕಾರಿ ಮಲ್ಲಪ್ಪ, ಮೈಲಾರಲಿಂಗೇಶ್ವರ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಗಂಗಾಧರ್, ಉಪ ತಹಶೀಲ್ದಾರ್ ಫಾತಿಮಾ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.