ಉಚ್ಚoಗಿದುರ್ಗ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಜ.29 ರಂದು 11 ಗಂಟೆಗೆ ಉಚ್ಚoಗೇಮ್ಮ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳ ಹರಾಜು ಪ್ರಕ್ರಿಯೆ ನಡೆಯಲಿದೆ.
ಬಳ್ಳಾರಿ/ವಿಜಯನಗರ ಜಿಲ್ಲೆ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ಎಂ.ಎಚ್. ಪ್ರಕಾಶ್ ರಾವ್ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಈ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವವರೂ 10000 ರೂ.ಠೇವಣಿಯನ್ನ ದೇವಸ್ಥಾನದ ಕಚೇರಿಯಲ್ಲಿ ಹರಾಜು ಪ್ರಕ್ರಿಯೆ ಪ್ರಾರಂಭವಾಗುವ ಮುಂಚೆ ಕಟ್ಟಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಶ್ರೀ ಉತ್ಸವಾoಭ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಚ್ ಮಲ್ಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.