Connect with us

Dvgsuddi Kannada | online news portal | Kannada news online

ದಾವಣಗೆರೆ: ಸಮುದಾಯ ಆರೋಗ್ಯ ಅಧಿಕಾರಿಗಳ 16 ಹುದ್ದೆಗಳಿಗೆ ಅರ್ಜಿ ಆಹ್ವಾನ; 30 ಸಾವಿರ ವೇತನ

job

ದಾವಣಗೆರೆ

ದಾವಣಗೆರೆ: ಸಮುದಾಯ ಆರೋಗ್ಯ ಅಧಿಕಾರಿಗಳ 16 ಹುದ್ದೆಗಳಿಗೆ ಅರ್ಜಿ ಆಹ್ವಾನ; 30 ಸಾವಿರ ವೇತನ

ದಾವಣಗೆರೆ:  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2021-22ನೇ ಸಾಲಿಗೆ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಸಮುದಾಯ ಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) 16 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್/ ಪೋಸ್ಟ್ ಬಿಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ.ಎನ್.ಸಿ/ಐ.ಎನ್.ಸಿ ನಿಂದ ನೋಂದಣಿ ಹೊಂದಿರಬೇಕು. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ರಾಜ್ಯದಲ್ಲಿ 10 ವರ್ಷ ವಾಸದ ದೃಢೀಕರಣ ಹೊಂದಿರಬೇಕು.

ಮಾಸಿಕ ಸಂಭಾವನೆ ಪ್ರತಿ ತಿಂಗಳಿಗೆ ರೂ. 22,000 ಜೊತೆಗೆ ಹೆಚ್ಚುವರಿಯಾಗಿ ಪರಫಾರಮೆನ್ಸ್ ಬೇಸ್ ಇನ್ಸೆಂಟಿವ್ ರೂ. 8000/-ವರೆಗೆ (ಸೇವಾ ಆಧಾರ ಪರಿಗಣಿಸಿ) ನೀಡಲಾಗುವುದು.ಗರಿಷ್ಠ ವಯೋಮಿತಿ, ಸಾಮಾನ್ಯ ಅಭ್ಯರ್ಥಿ-35 ವರ್ಷ. ಎಸ್‍ಸಿ/ಎಸ್‍ಟಿ/ ಪ್ರ.ವರ್ಗ 1/ ಮಾಜಿ ಸೈನಿಕರಿಗೆ 40 ವರ್ಷ, 2ಎ/2ಬಿ/3ಎ/3ಬಿ/ ಹಾಗೂ ಇತರೆ ಹಿಂದುಳಿದ ವರ್ಗ(ರಾಜ್ಯ) 38 ವರ್ಷ ನಿಗದಿಪಡಿಸಲಾಗಿದೆ.ಅರ್ಜಿಯನ್ನು ಆನ್‍ಲೈನ್ ಮುಖಾಂತರ ಮಾತ್ರ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಸಲ್ಲಿಸಬೇಕು. ಹಾಗೂ ಪರೀಕ್ಷೆಯನ್ನು ಆನ್‍ಲೈನ್ ಮುಖಾಂತರ ನಡೆಸಲಾಗುವುದು. ಅರ್ಜಿ ಸಲ್ಲಿಸಲು ಜ. 23 ಕೊನೆಯ ದಿನವಾಗಿದ್ದು, ಜ. 29 ರಂದು ಲಿಖಿತ ಪರೀಕ್ಷೆ ನಡೆಸಿ, ಫಲಿತಾಂಶ ಪ್ರಕಟಿಸಲಾಗುವುದು. ಫೆ. 01 ರಂದು ಮೂಲದಾಖಲೆಗಳನ್ನು ಪರಿಶೀಲಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್http://karunadu.karnataka.gov.in/hfw/pages/home.aspx ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಎಸ್‍ಎಸ್ ಆಸ್ಪತ್ರೆ ಹಿಂಭಾಗ , ಎನ್‍ಸಿಸಿ ಕ್ಯಾಂಪ್ ಹತ್ತಿರ, ಶ್ರೀ ರಾಮನಗರ ರಸ್ತೆ ದಾವಣಗೆರೆ 577005 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top