ಡಿವಿಜಿ ಸುದ್ದಿ, ಬೆಂಗಳೂರು: ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಯ ವರದಿಯ ಶಿಫಾರಸಿನಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಟಾಕಿ ಮಾರಾಟ ನಿಷೇಧಿಸಿದ್ದಾರೆ. ಈ ಬಾರಿ ಸರಳವಾಗಿ ಹಬ್ಬ ಆಚರಿಸಿ ಎಂದು ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಇಂದು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ, ಇಂದ್ರಧನುಷ್ ಲಸಿಕೆ ಅಭಿಯಾನ ಸೇರಿದಂತೆ ಇತರೆ ಯೋಜನೆಗಳ ಕುರಿತು ಚರ್ಚಿಸಲು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರೊಂದಿಗೆ ಸಭೆ ನಡೆಸಿದರು. ನಂತರ ಅಂಬ್ಯುಲೆನ್ಸ್ ಸೇವೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಗ್ರಾಮೀಣ ಪ್ರದೇಶಗಳು ಸೇರಿದಂತೆ ಎಲ್ಲೆಡೆ ಸೇವೆ ದೊರೆಯುವಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.



