ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಲ್ಲಿನ ಬಾಕಿ ಉಳಿದ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್‌ಲಾಗ್ ಹುದ್ದೆಗಳನ್ನು ಮೊದಲು ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಹಣಕಾಸು ಹಾಗೂ ಉನ್ನತ ಶಿಕ್ಷಣ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಬೀಡಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಶಿಕ್ಷಣ ಕ್ಷೇತ್ರದ ಗುಣಮಟ್ಟ ಹೆಚ್ಚಿಸಲು ಬೋಧಕ ಸಿಬ್ಬಂದಿ ನೇಮಕ ಅಗತ್ಯ. ಹೀಗಾಗಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಬೇಕು ಎಂದರು.
ಉನ್ನತ ಶಿಕ್ಷಣ ಇಲಾಖೆಯ ಬಳಿ 47 ಕೋಟಿ ರೂ. ಲಭ್ಯವಿದ್ದು, ಮುಂದಿನ ವರ್ಷದ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ಒದಗಿಸುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಶಿಥಿಲಾವಸ್ಥೆಯಲ್ಲಿರುವ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನ ನವೀಕರಣ ಮತ್ತು ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು,
ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸುಧಾರಣೆಗೆ ಆದ್ಯತೆ ನೀಡಬೇಕು. ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13169 ವಿದ್ಯಾರ್ಥಿಗಳ ಸಾಮರ್ಥ್ಯದ 224 ವಸತಿ ನಿಲಯಗಳನ್ನು ಹಸ್ತಾಂತರಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿದ್ಧವಿದ್ದು, ಇದನ್ನು ಸಚಿವ ಸಂಪುಟದ ಮುಂದೆ ತರುವಂತಬೇಕು. ಇದೇ ಸಂದರ್ಭದಲ್ಲಿ ವಿಶ್ವವಿದ್ಯಾಲಯಗಳು ವಿಭಜನೆಯಾಗಿರುವುದರಿಂದ ಹಳೆಯ ಐದು ವಿಶ್ವವಿದ್ಯಾಲಯಗಳ ಪಿಂಚಣಿ ವಿತರಣೆ ಸಮಸ್ಯೆ ಕುರಿತು ಚರ್ಚಿಸಲಾಯಿತು.
ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ 622 ಹುದ್ದೆ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ



