ತುಮಕೂರು: ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ್ ಪುತ್ರಿ, ಬಿವಿಬಿ ಕಾಲೇಜು ಎಂಸಿಎ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಅದು ಇಬ್ಬರ ನಡುವೆ ಪರಸ್ಪರ ಪ್ರೀತಿ ಉಂಟಾಗಿ, ಆ ಹುಡುಗಿ ದೂರ ಹೋಗಲು ಶುರು ಮಾಡಿದ್ದಳೋ, ಆ ಹುಡುಗ ಹೋಗಿ ಚುಚ್ಚಿದ್ದಾನೆ. ಅದರಲ್ಲಿ ಲವ್ ಜಿಹಾದ್ ನನಗೆ ಕಾಣಿಸಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮ ಜೊತೆ ಮಾತನಾಡಿ, ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. ನನ್ನನ್ನು ಬಿಟ್ಟು ಬೇರೆ ಮದುವೆ ಮಾಡಿಕೊಳ್ತಾಳೋ ಏನೋ ಅಂದುಕೊಂಡು ಹೀಗೆ ಆಗಿದೆ. ಪರಸ್ಪರ ಪ್ರೀತಿ ಮೇಲೆ ಆಗಿರುವ ಘಟನೆ ಇದು. ಇದರಲ್ಲಿ ಲವ್ ಜಿಹಾದ್ ಅನ್ನೋದು ಕಾಣುತ್ತಿಲ್ಲ ಎಂದರು.
ಬಿಜೆಪಿಯವರು ಸ್ವಾಭಾವಿಕವಾಗಿ ಇಂತಹ ವಿಚಾರದಲ್ಲಿ ಕಾಂಗ್ರೆಸ್ ನ್ನು ದೂಷಣೆ ಮಾಡೋದು ಅವರ ಕೆಲಸ . ಎಲ್ಲವನ್ನೂ ರಾಜಕೀಯ ದೃಷ್ಟಿಯಿಂದ ನೋಡೋದು ಈ ಚುನಾವಣೆ ಸಂದರ್ಭದಲ್ಲಿ ಒಳ್ಳೆದಲ್ಲ ಘಟನೆ ಬಗ್ಗೆ ತನಿಖೆ ನಡೆಯತ್ತಿದೆ. ಮಗಳನ್ನು ಫಾಲೋ ಮಾಡ್ತಾ ಇದ್ದ ತಾಯಿ ಮೇಲೂ ಹಲ್ಲೆ ಮಾಡಿದ್ದಾರೆ, ಅವರನ್ನು ರಕ್ಷಣೆ ಮಾಡಲಾಗಿದೆ. ಈ ಘಟನೆಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತದೆ. ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಸಿದರು.



