Connect with us

Dvgsuddi Kannada | online news portal | Kannada news online

ರೈತರಿಗೆ ಗುಡ್ ನ್ಯೂಸ್: ಸತತ ಅಡಿಕೆ ಬೆಲೆ ಕುಸಿತ ತಪ್ಪಿಸಲು ವಿದೇಶದಿಂದ ಆಮದಾಗುವ ಅಡಿಕೆ ಕನಿಷ್ಟ ಬೆಲೆ ಹೆಚ್ಚಳ

ಪ್ರಮುಖ ಸುದ್ದಿ

ರೈತರಿಗೆ ಗುಡ್ ನ್ಯೂಸ್: ಸತತ ಅಡಿಕೆ ಬೆಲೆ ಕುಸಿತ ತಪ್ಪಿಸಲು ವಿದೇಶದಿಂದ ಆಮದಾಗುವ ಅಡಿಕೆ ಕನಿಷ್ಟ ಬೆಲೆ ಹೆಚ್ಚಳ

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಕುಸಿತವನ್ನು ತಡೆಯಲು ಕೇಂದ್ರವು ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಕೆಜಿಗೆ 251 ರೂ.ನಿಂದ 351 ರೂ.ಗೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಕಡಿಮೆ ಬೆಲೆಯಲ್ಲಿ ಅಡಿಕೆ ಖರೀದಿಗೆ ಬ್ರೇಕ್ ಬೀಳಲಿದೆ. ಜತೆಗೆ ದೇಶಿ ಮಾರುಕಟ್ಟೆಯಲ್ಲಿ ಅಡಿಕೆ ಖರೀದಿ ಸುಧಾರಣೆಯಾಗುವ ಸಾಧ್ಯತೆಗಳಿವೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಧೀನದಲ್ಲಿರುವ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ(DGFT), ವಾಣಿಜ್ಯ ಇಲಾಖೆಯು ಆಮದು ನೀತಿಗೆ ತಿದ್ದುಪಡಿ ಮಾಡುವ ಮೂಲಕ ಈ ಕುರಿತು ಅಧಿಸೂಚನೆ ಹೊರಡಿಸಿದೆ. ಸುಂಕದ ಮಾರ್ಗಗಳ ಮೇಲೆ ವಿಧಿಸಲಾದ ಕನಿಷ್ಠ ಆಮದು ಬೆಲೆಯನ್ನು ಕೆಜಿಗೆ 251 ರೂ.ನಿಂದ 351 ರೂ.ಗೆ ಪರಿಷ್ಕರಿಸಲಾಗಿದೆ. ಹೆಚ್ಚಳವು ದೇಶೀಯ ಮಾರುಕಟ್ಟೆ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸಹಾಯ ಮಾಡುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ಅಡಿಕೆ ಬೆಳೆಗಾರರು ದೇಶೀಯ ಬೆಳೆಗಾರರನ್ನು ರಕ್ಷಿಸಲು ಕನಿಷ್ಠ ಆಮದು ಬೆಲೆಯನ್ನು ಸರ್ಕಾರಕ್ಕೆ ಒತ್ತಾಯಿಸಿದ್ದರು.

ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ, ಭಾರತದಲ್ಲಿ ಈ ಹಣಕಾಸು ವರ್ಷದಲ್ಲಿ ಅಡಿಕೆ ಆಮದು ಹೆಚ್ಚಾಗಿದೆ ಮತ್ತು 2022-23 ರ ಆರ್ಥಿಕ ವರ್ಷದ ನವೆಂಬರ್ ಅಂತ್ಯದವರೆಗೆ ಒಟ್ಟು 61,450 ಟನ್ ಅಡಿಕೆ ಆಮದು ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಕಳೆದ ವಾರ ಸಂಸತ್ತಿಗೆ ತಿಳಿಸಿದೆ.

ಕೆನಡಾ, ಇಂಡೋನೇಷ್ಯಾ, ಮಾಲ್ಡೀವ್ಸ್, ಮ್ಯಾನ್ಮಾರ್, ಸಿಂಗಾಪುರ, ಶ್ರೀಲಂಕಾ, ತಾಂಜಾನಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ವಿಯೆಟ್ನಾಂ ಮತ್ತು ನೇಪಾಳದಿಂದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ವಾಣಿಜ್ಯ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಅವರು ಮಂಗಳೂರಿನ ಬಿಜೆಪಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರ ಪ್ರಶ್ನೆಗೆ ಉತ್ತರಿಸಿದರು. ಆದಾಗ್ಯೂ, ಕಳೆದ ನಾಲ್ಕು ವರ್ಷಗಳಿಂದ ಭೂತಾನ್‌ನಿಂದ ಯಾವುದೇ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿಲ್ಲ ಎಂದು ಸಚಿವರು ಹೇಳಿದ್ದಾರೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top