Connect with us

Dvgsuddi Kannada | online news portal | Kannada news online

ಇಂಡಿಯಾ ಪೋಸ್ಟ್ ನಲ್ಲಿ ಗ್ರಾಮೀಣ ಡಾಕ್ ಸೇವಕ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಇಂಡಿಯಾ ಪೋಸ್ಟ್ ನಲ್ಲಿ ಗ್ರಾಮೀಣ ಡಾಕ್ ಸೇವಕ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ವಿವಿಧ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಗ್ರಾಮೀಣ ಡಾಕ್ ಸೇವಕ್  ನ 650 ಹುದ್ದೆ  ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಮೂಲಕ ದೇಶಾದ್ಯಂತ ಬ್ಯಾಂಕ್ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ippbonline.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್​ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆಫ್ ಲೈನ್ ನಲ್ಲಿ ಸಲ್ಲಿಸಿದ  ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಿವಿಧ ರಾಜ್ಯಗಳಲ್ಲಿ ಒಟ್ಟು 650 ಹುದ್ದೆಗಳನ್ನು ಈ ನೇಮಕಾತಿ ಅಭಿಯಾನದ ಮೂಲಕ ಭರ್ತಿ ಮಾಡಲಾಗುತ್ತದೆ. ಹೀಗೆ ಆಯ್ಕೆಯಾದ ಅಭ್ಯರ್ಥಿಗಳು ಬೇರೆ ಬೇರೆ ಕಾರ್ಯಗಳಿಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನೇಮಕಗೊಳ್ಳುವವರ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 30000 ವರೆಗೆ ವೇತನವನ್ನು ನೀಡಲಾಗುತ್ತದೆ.

ವಿದ್ಯಾರ್ಹತೆ:ಈ ಹುದ್ದೆಗಳಿಗೆ ಪದವಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು . ಅಲ್ಲದೆ, ಅಭ್ಯರ್ಥಿಯು ಕನಿಷ್ಠ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ವಯೋಮಿತಿ: ಈ ಹುದ್ದೆಗಳಿಗೆ 20 ರಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 20, 2022 ಪರೀಕ್ಷೆಯ ದಿನಾಂಕ – ಜೂನ್, 2022,  ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆಯ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top