ಇಸ್ಲಾಮಬಾದ್: ಭಾರತ ಫೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಬಿಡುಗಡೆ ವೇಳೆ ಪಾಕಿಸ್ತಾನ ಸೇನಾ ಮುಖ್ಯಸ್ಥರ ಕಾಲುಗಳಲ್ಲಿ ನಡುಕ ಉಂಟಾಗಿತ್ತು ಎಂದು ಪಾಕ್ ಸಂಸದ ಅಯಾಜ್ ಸಾದಿಕ್ ಹೇಳಿದ್ದಾರೆ.
ಈ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿರುವ ಅವರು, ಪಾಕಿಸ್ತಾನ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದರೆ ಆ ರಾತ್ರಿ 9 ಗಂಟೆ ವೇಳೆಗೆ ಭಾರತ ಪಾಕಿಸ್ತಾನ ಮೇಲೆ ದಾಳಿ ಮಾಡುತ್ತದೆ ಎಂದು ವಿದೇಶಾಂಗ ಸಚಿವ ಖುರೇಷಿ ಹೇಳಿದ್ದರು ಎಂದು ಪಾಕಿಸ್ತಾನ ಮಾಧ್ಯಮವೊಂದು ವರದಿ ಮಾಡಿದೆ.
ಅಭಿನಂದನ್ ರನ್ನು ತಕ್ಷಣ ಬಿಡುಗಡೆ ಮಾಡದಿದ್ದರೆ ರಾತ್ರಿ ೯ ಗಂಟೆಯಷ್ಟರಲ್ಲಿ ಭಾರತ ಪಾಕ್ ಮೇಲೆ ಆಕ್ರಮಣ ಮಾಡಲಿದೆ ಎಂದಿದ್ದರು ಪಾಕ್ ವಿದೇಶಾಂಗ ಸಚಿವ ಖುರೇಷಿ pic.twitter.com/7qsZ5RoBQn
— Prathap Simha (@mepratap) October 29, 2020
ಪ್ರಮುಖ ಸಭೆಯಲ್ಲಿದ್ದ ಸೇನಾ ಮುಖ್ಯಸ್ಥ ಜನಲರ್ ಬಾಜ್ವಾ, ವಿರೋಧಿ ಪಕ್ಷ ನಾಯಕರು, ಸಂಸತ್ ಸದಸ್ಯರು ಸೇರಿದಂತೆ ಎಲ್ಲರೂ ಅಭಿನಂದನ್ ಅವರನ್ನು ಬಿಡುಗಡೆ ಮಾಡಲು ಹೇಳಿದ್ದರು. ಸಭೆಯಲ್ಲಿ ಭಾಗಿಯಾಗಲು ಇಮ್ರಾನ್ ಖಾನ್ ನಿರಾಕರಿಸಿದ್ದರು. ಈ ವೇಳೆ ಸೇನಾ ಮುಖ್ಯಸ್ಥ ಜನಲರ್ ಬಾಜ್ವಾ ಕೋಣೆಗೆ ಬಂದರು. ಅವರ ಕಾಲುಗಳು ನಡುಗುತ್ತಿದ್ದವು, ಅವರು ಬೆವರುತ್ತಿದ್ದರು ಎಂದರು.
ವಿದೇಶಾಂಗ ಸಚಿವರು ದೇವರ ಸಲುವಾಗಿ ಅವರನ್ನು ಬಿಡಲಿ, ಭಾರತ ರಾತ್ರಿ 9 ಗಂಟೆಗೆ ದಾಳಿ ಮಾಡಲಿದೆ ಎಂದಿದ್ದರು ಎಂದು ಸಾದಿಕ್ ಅಂದಿನ ಘಟನೆಯ ಬಗ್ಗೆ ಬಿಚ್ಚಿಟ್ಟಿದ್ದಾರೆ. ಅಲ್ಲದೇ ಮೊದಲು ಅಭಿನಂದನ್ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ಸರ್ಕಾರದ ಬೆಂಬಲಕ್ಕೆ ನಿಲ್ಲುತ್ತೇವೆ ಎಂದಿದ್ದ ಪ್ರತಿಪಕ್ಷಗಳು ಮತ್ತೆ ಅವರ ಬೆಂಬಲಿಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.
2019ರ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕ್ ವಾಯುಸೇನೆಯ ನಡುವಿನ ನಡೆದ ಹೋರಾಟದ ಸಂದರ್ಭದಲ್ಲಿ ಭಾರತದ ವಾಯುಪ್ರದೇಶವನ್ನು ಅತಿಕ್ರಮಣ ಮಾಡಿದ್ದ ಪಾಕಿಸ್ತಾನದ ಎಫ್-19 ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿತ್ತು. ಈ ವೇಳೆ ವಿಂಗ್ ಕಂಮಾಡರ್ ಆಗಿದ್ದ ವರ್ಧಮಾನ್ ಅವರು ಪಾಕ್ ನೆಲದಲ್ಲಿ ಇಳಿದಿದ್ದರು. ಮಾರ್ಚ್ 1 ರಂದು ಅಭಿನಂದನ್ ಅವರನ್ನು ಪಾಕ್ ಸರ್ಕಾರ ಭಾರತಕ್ಕೆ ಮರಳಿ ಕಳುಹಿಸಿತ್ತು.



