ಲಾಹೋರ್ : 26/11ರ ಮುಂಬೈ ದಾಳಿಯ ಸಂಚುಕೋರ ಲಷ್ಕರ್ ಎ ತೊಯ್ಬಾ(ಎಲ್‌ಇಟಿ) ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿಯನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ.
ಈ ಕುರಿತಂತೆ ಪಾಕಿಸ್ತಾರನದ ಭಯೋತ್ಪಾದನೆ ನಿಗ್ರಹ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದ್ದು, ಭಯೋತ್ಪಾದನೆ ಕೃತ್ಯಕ್ಕೆ ಹಣಕಾಸಿನ ನೆರವು ನೀಡುವ ಆರೋಪಕ್ಕೆ ಸಂಬಂಧಿಸಿದಂತೆ ಝಕಿ ಉರ್ ರೆಹಮಾನ್ ಲಖ್ವಿಯನ್ನು ಬಂಧಿಸಲಾಗಿದೆ. ಲಷ್ಕರ್ ಎ ತೋಯ್ಬಾದ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ, ಮುಂಬೈ ದಾಳಿಯ ಸಂಚುಕೋರನಾಗಿದ್ದನು. ಎಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿಯನ್ನು ಪಾಕಿಸ್ಥಾನ ಬಹಿರಂಗಪಡಿಸಿಲ್ಲ.