ಮುಂಬೈ: 2021ರ ಸಾಲಿನ ಐಪಿಎಲ್ ಗೆ ದಿನಾಂಕ ನಿಗದಿಯಾಗಿದೆ. ಬಿಸಿಸಿಐ ಇಂದು ಐಪಿಎಲ್ 14ರ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಈ ಬಾರಿಯ ಐಪಿಎಲ್ ಎಪ್ರಿಲ್ 9ರಂದು ಚೆನ್ನೈನಲ್ಲಿ ಆರಂಭವಾಗಲಿದೆ. ಫೈನಲ್ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 30ರಂದು ನಡೆಯಲಿದೆ.
ಕಳೆದ ಬಾರಿ ಯುಎಇ ನಲ್ಲಿ ನಡೆದಿದ್ದ ಕೂಟ ಈ ಬಾರಿ ಭಾರತಕ್ಕೆ ಮರಳಿದೆ. ಈ ಬಾರಿ ಕೇವಲ ಆರು ಮೈದಾನದಲ್ಲಿ ಪಂದ್ಯಗಳು ನಡೆಯಲಿದೆ. ಅಹಮದಾಬಾದ್, ಬೆಂಗಳೂರು, ಚೆನ್ನೈ, ದಿಲ್ಲಿ, ಮುಂಬೈ ಮತ್ತು ಕೋಲ್ಕತ್ತಾದಲ್ಲಿ ಪಂದ್ಯಗಳು ನಡೆಯಲಿದೆ.
ಮೊದಲ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ..







