ದಾವಣಗೆರೆ: ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿರುವ 2 FLC ಕೌನ್ಸಿಲರ್ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ದಾವಣಗೆರೆ – ಹಾವೇರಿ ಜಿಲ್ಲೆ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನವೆಂಬರ್ 30, 2022ರ ಮೊದಲು ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿದೆ.ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿರುವ ಹುದ್ದೆಗಳ ಸಂಖ್ಯೆ : 2, ಉದ್ಯೋಗ ಸ್ಥಳ : ದಾವಣಗೆರೆ – ಹಾವೇರಿ, ಪೋಸ್ಟ್ ಹೆಸರು : FLC ಕೌನ್ಸಿಲರ್ ವೇತನ : ರೂ.18000/- ಪ್ರತಿ ತಿಂಗಳು.
ವಿದ್ಯಾರ್ಹತೆ ವಿವರ :ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ) ಪ್ರಾದೇಶಿಕ ವ್ಯವಸ್ಥಾಪಕರು, ಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ಕಚೇರಿ-UDUPI-II, 2 ನೇ ಮಹಡಿ, ಶಾಮಿಲಿ ಇನ್, ಅಂಬಲಪಾಡಿ, ಉಡುಪಿ – 576103 ಕರ್ನಾಟಕ. ಈ ವಿಳಾಸಕ್ಕೆ ನವೆಂಬರ್ 30, 2022ರ ಮೊದಲು ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-10-2022 ಹಾಗೂ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-11-2022.



