ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಗುತ್ತಿಗೆ ಅಧಾರದ ಎನ್‍ಹೆಚ್‍ಎಂ ಅಡಿಯಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆ. 20ರ ವರೆಗೆ ವಿಸ್ತರಿಸಲಾಗಿದೆ.
ಸೆ.17 ರಂದು ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾ ಮೇಳವನ್ನು ಹಮ್ಮಿಕೊಂಡಿರುವುದರಿಂದ ಅರ್ಜಿ ನೀಡುವ ಅವಧಿ ವಿಸ್ತರಿಸಲಾಗಿದೆ. ಅರ್ಜಿದಾರರು ಭರ್ತಿ ಮಾಡಿದ ಅರ್ಜಿಯೊಂದಿಗೆ ವಿದ್ಯಾರ್ಹತೆ, ಮೀಸಲಾತಿ ಮತ್ತು ಅನುಭವಕ್ಕೆ ಸಂಬಂಧಿಸಿದಂತೆ ಮೂಲದಾಖಲೆಗಳನ್ನು ಪರಿಶೀಲನೆಗೆ ಹಾಜರುಪಡಿಸಬೇಕು. ಇತ್ತೀಚಿನ ಭಾವಚಿತ್ರ ಹಾಗೂ ಒಂದು ಸೆಟ್ ಸ್ವಯಂ ಧೃಡಿಕೃತ ದಾಖಾಲಾತಿಗಳನ್ನು ಲಗತ್ತಿಸಿ ಸೆ.20 ರ ಸಂಜೆ 5 ಗಂಟೆಗೆಯೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಎಸ್‍ಎಸ್ ಆಸ್ಪತ್ರೆ ಹಿಂಭಾಗ, ಎನ್‍ಸಿಸಿ ಕ್ಯಾಂಪ್ ಪಕ್ಕ, ದಾವಣಗೆರೆ ಇವರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.



