ಚಿತ್ರದುರ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು NHM ಯೋಜನೆಯಡಿಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 22 ನರ್ಸ್ಗಳನ್ನು ಆಯ್ಕೆ ಮಾಡಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಅಧಿಕೃತ ವೆಬ್ಸೈಟ್ chitradurga.nic.in ಗೆ ಭೇಟಿ ನೀಡಬಹುದು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ GNM ನರ್ಸಿಂಗ್ ಪೂರ್ಣಗೊಳಿಸಿರಬೇಕು. ಜೊತೆಗೆ ಈ ಕ್ಷೇತ್ರದಲ್ಲಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ 45 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿಡಿ ಸಡಿಲಿಕೆಯನ್ನು ಕೂಡ ನೀಡಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 13,225 ರೂ. ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮಾಡಲಾಗುತ್ತದೆ. ಆ ಬಳಿಕ ಲಿಖಿತ ಪರೀಕ್ಷೆ ಇರಲಿದ್ದು, ಇದಾದ ನಂತರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 22, 2023. ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ: District Project Management Unit (N.H.M),
District Laboratory Premises,
Back to District Hospital,
Chitradurga. ಹೆಚ್ಚಿನ ವಿವರಗಳಿಗಾಗಿ ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ: 9449843104.



