Connect with us

Dvgsuddi Kannada | online news portal | Kannada news online

ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ತುಮಕೂರು: ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವಂತ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಜಾರಿಪೇದೆ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾ.24 ದಿನ ಆಗಿರುತ್ತದೆ.

ಈ ಕುರಿತಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಸೂಚನೆ ಹೊರಡಿಸಿದ್ದು, ತುಮಕೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳಿಗೆ ದಿನಾಂಕ 04-03-2020ರಂತೆ ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಕೋವಿಡ್-19 ಕಾರಣದಿಂದಾಗಿ ಹಾಗೂ ಮಾನ್ಯ ಉಚ್ಚನ್ಯಾಯಾಲಯದ ನಿರ್ದೇಶನ ಅನುಸಾರ ನೇಮಕಾತಿಯ ಎಲ್ಲಾ ಪ್ರಕ್ರಿಯೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು.ಪ್ರಸ್ತುತ ಮಾನ್ಯ ಉಚ್ಚನ್ಯಾಯಾಲಯದ ನಿರ್ದೇಶನದನ್ವಯ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿರುತ್ತದೆ.

ಬೆರಳಚ್ಚುಗಾರರ-07, ಬೆರಳಚ್ಚು ನಕಲುಗಾರರು-03 ಹಾಗೂ ಜಾರಿಪೇದೆ -11 ಹುದ್ದೆಗಳಿಗೆ ಆನ್ ಲೈನ್ ಮೂಲಕ ದಿನಾಂಕ 23-02-2021ರಿಂದ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-03-2021 ಆಗಿದೆ. ಚಲನ್ ಮೂಲಕ ಶುಲ್ಕ ಸಂದಾಯ ಮಾಡಲು 26-03-2021 ಕೊನೆಯ ದಿನಾಂಕವಾಗಿದೆ.ಅರ್ಹ ಅಭ್ಯರ್ಥಿಗಳು https://districts.ecourts.gov.in/tumakuru ಜಾಲತಾಣಕ್ಕೆ ಭೇಟಿ ನೀಡಿ, ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top