ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾ*ವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಉಡುಪಿ: ಕಾಮಿಡಿ ಕಿಲಾಡಿ ಖ್ಯಾತಿಯ ನಟ ರಾಕೇಶ್ ಪೂಜಾರಿ (actor Rakesh Poojary) ಸಾವನ್ನಪ್ಪಿದ್ದಾರೆ. ಕನ್ನಡ ಮನರಂಜನ ಲೋಕದಲ್ಲಿ ಸಾಕಷ್ಟು ಹೆಸರು ಮಾಡಿದ್ದ ರಾಕೇಶ್ ಸಿನಿಮಾ, ಕಿರುತೆರೆಯಲ್ಲಿ ಸಕ್ರಿಯವಾಗಿದ್ದರು. ಉಡುಪಿ ಮೂಲದ 33 ವರ್ಷದ ರಾಕೇಶ್ ಪೂಜಾರಿ ಮೇ‌ 12 ರಾತ್ರಿ 2 ಗಂಟೆಗೆ ನಿಧನರಾಗಿದ್ದಾರೆ.

ಉಡುಪಿಯ ಕಾರ್ಕಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಸ್ನೇಹಿತರ ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಕುಸಿದು ಬಿದ್ದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪಾಲ್ಗೊಂಡಿದ್ದರು. ಅವರಿಗೆ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ.

ಕನ್ನಡದ ಜನಪ್ರಿಯ ಕಾರ್ಯಕ್ರಮ ಕಾಮಿಡಿ ಕಿಲಾಡಿ- 3 ವಿಜೇತರಾಗಿದ್ದರು. ತನ್ನ ಅಭಿನಯದಿಂದ ಕರುನಾಡಿನ ಮನಗೆದ್ದಿದ್ದರು. ‘ಕಾಮಿಡಿ ಕಿಲಾಡಿ’ ಶೋನಲ್ಲಿ ಅವರಿಗೆ ಅಪಾರ ಜನಪ್ರಿಯತೆ ಸಿಕ್ಕಿತು.

ರಾಕೇಶ್ ಪೂಜಾರಿ 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಶೋಗೆ ಸೆಲೆಕ್ಟ್ ಆಗಿದ್ದರು. ಇದರಲ್ಲಿ ರನ್ನರ್ ಅಪ್ ತಂಡದ ಸದಸ್ಯರಾಗಿದ್ದರು. ಬಳಿಕ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿಜೇತರಾಗಿದ್ದರು.ಕನ್ನಡ ಮತ್ತು ತುಳುವಿನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ರಾಕೇಶ್ ಕನ್ನಡದಲ್ಲಿ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆ‌ರ್ ಪೊಲೀಸ್’, ‘ಪಮ್ಮನ್ನೆ ದಿ ಗ್ರೇಟ್’, ‘ಉಮಿಲ್’, ‘ಇಲ್ಲೋಕ್ಕೆಲ್’ ಸೇರಿದಂತೆ ಹಲವು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದರು.

ನಿಧನ ಸುದ್ದಿ ಕೇಳಿ ಕನ್ನಡ ಕಿರುತೆರೆ ಲೋಕದ ಆಘಾತಕ್ಕೆ ಒಳಗಾಗಿದೆ. ರಿಷಬ್‌ ಶೆಟ್ಟಿ ಅವರ ʼಕಾಂತಾರ -1ʼನಲ್ಲಿನ ಶೂಟಿಂಗ್‌ನಲ್ಲಿ ರಾಕೇಶ್‌ ಇತ್ತೀಚೆಗೆ ಭಾಗಿಯಾಗಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *