ರಾಯಚೂರು : ಉಪ ಮುಖ್ಯಮಂತ್ರಿ ಮಾಡುವಂತೆ ದೇವರಿಗೆ ಬೇಡಿಕೆ ಸಲ್ಲಿಸಿ ಭಾರೀ ಸುದ್ದಿಯಾಗಿದ್ದ ಸಚಿವ ಬಿ.ಶ್ರೀರಾಮುಲು, ಇದೀಗ ಮತ್ತೆ ಉಪ ಮುಖ್ಯಮಂತ್ರಿಯಾಗುವ ಬಯಕೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ.
ಮಸ್ಕಿಯಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ, ಅರಣ್ಯ ಸಚಿವ ಆನಂದ್ ಸಿಂಗ್ ರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೊಳಕಾಲ್ಮೂರು ತಾಲೂಕನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಬೇಕು ಎನ್ನುವುದು ಹಲವು ಹೋರಾಟಗಾರರ ಬಹುದಿನದ ಬೇಡಿಕೆಯಾಗಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಅಂತಿಮವಾಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ. ಡಿಸಿಎಂ ಹುದ್ದೆಯ ವಿಚಾರ ಪಕ್ಷದ ವೇದಿಕೆಯಲ್ಲಿ ನಿರ್ಧರಿಸಲಾಗುತ್ತದೆ. ಆದರೆ, ನಾನು ಉಪ ಮುಖ್ಯಮಂತ್ರಿಯಾಗಬೇಕು ಎಂಬುದು ಜನರ ಬೇಡಿಕೆಯಾಗಿದೆ ಎಂದು ತಿಳಿಸಿದರು.



