Connect with us

Dvgsuddi Kannada | online news portal | Kannada news online

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆಗಳ ನೋಂದಣಿ ಶುರು..!!

images 2024 02 22T105655.772

ಪ್ರಮುಖ ಸುದ್ದಿ

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆಗಳ ನೋಂದಣಿ ಶುರು..!!

ಬೆಂಗಳೂರು: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2024-25 ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಈ ಯೋಜನೆಗೆ ನೋಂದಣಿ ಆರಂಭವಾಗಿದೆ.

ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು. ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.

ಪ್ರಸಕ್ತ(2024) ಸಾಲಿನ ಮುಂಗಾರು ಹಂಗಾಮಿನ ವಿಮಾ ಮೊತ್ತ ಮತ್ತು ರೈತರ ವಿಮಾ ಕಂತಿನ ವಿವರ ಇಂತಿದೆ. ಭತ್ತ (ನೀರಾವರಿ) ಸಾಮಾನ್ಯ ವಿಮಾ (ಪ್ರತಿ ಎಕರೆಗೆ) ವಿಮಾ ಮೊತ್ತ ರೂ.37,738.28 ರೈತರ ವಿಮಾಕಂತು ಶೇ.2 ರಂತೆ 754.77, ಭತ್ತ(ಮಳೆಯಾಶ್ರಿತ) ವಿಮಾ ಮೊತ್ತ 25,799.63 ರೂ., ರೈತರ ವಿಮಾ ಕಂತು ಶೇ.2 ರಂತೆ ರೂ 515.99. ನೋಂದಾಯಿಸಿಕೊಳ್ಳಲು 2024 ರ ಆಗಸ್ಟ್, 16 ಕೊನೆಯ ದಿನವಾಗಿದೆ.

ಮುಸುಕಿನ ಜೋಳ(ಮಳೆಯಾಶ್ರಿತ) ವಿಮಾ ಮೊತ್ತ ರೂ.22,865.55, ರೈತರ ವಿಮಾ ಕಂತು ಶೇ.2 ರಂತೆ ರೂ. 457.31. ನೋಂದಾಯಿಸಿಕೊಳ್ಳಲು ಜುಲೈ, 31 ಕೊನೆಯ ದಿನವಾಗಿದೆ.ಈ ಯೋಜನೆಯಲ್ಲಿ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಮತ್ತು ಆಧಾರ್ ಸಂಖ್ಯೆಯನ್ನು ನೀಡಿ ನೋಂದಾಯಿಸಿಕೊಳ್ಳಬೇಕು. ಯೋಜನೆಯ ಮಾಹಿತಿಯನ್ನು ಸಂರಕ್ಷಣೆ ತಂತ್ರಾಂಶದಲ್ಲಿ ಪಡೆಯಬಹುದು.

ವೆಬ್ ಸೈಟ್ https://www.samrakshane.karnataka.gov.in/ ಭೇಟಿ ನೀಡಿ. ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top