ಮಂಗಳೂರು: ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ ಗೆ ಹಡಗು ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 12 ಮೀನುಗಾರರು ನಾಪತ್ತೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ನವ ಮಂಗಳೂರು ಕರಾವಳಿ ಪ್ರದೇಶದಲ್ಲಿ ಘಟನೆ ನಡೆದಿದೆ. ಈ ಕುರಿತು ಇಂಡಿಯನ್ ಕೋಸ್ಟ್ ಗಾರ್ಡ್ ಟ್ವಿಟ್ ಮೂಲಕ ಮಾಹಿತಿ ನೀಡಿದ್ದು, ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಬೆಪೋರ್ ನಿಂದ ಮಂಗಳೂರಿನತ್ತ ಹೊರಟಿದ್ದ ಮೀನುಗಾರಿಕಾ ಬೋಟ್ ಗೆ ಹಡಗು ಡಿಕ್ಕಿಹೊಡೆದಿದೆ.
ಅಪಘಾತದಲ್ಲಿ 14 ಮೀನುಗಾರರು ನಾಪತ್ತೆಯಾಗಿದ್ದರು. ಅವರಲ್ಲಿ ಇಬ್ಬರು ಪತ್ತೆಯಾಗಿದ್ದು, ಇನ್ನುಳಿದ ಮೀನುಗಾರರಿಗೆ ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದೆ.



