ಬೆಂಗಳೂರು: ಇತ್ತೀಚೆಗೆ ನಡೆದ ರಾಜರಾಜೇಶ್ವರಿ ನಗರ, ಶಿರಾ ವಿಧಾನಸಭೆ ಉಪಚುನಾವಣೆಯಲ್ಲಿ ಚುನಾಯಿತರಾದ ಮುನಿರತ್ನ ಹಾಗೂ ಡಾ.ಸಿ.ಎಂ.ರಾಜೇಶ್‍ಗೌಡ ಇಂದು ವಿಧಾನಸಭೆಯಲ್ಲಿ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಮ್ಮುಖದಲ್ಲಿ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ನೂತನ ಶಾಸಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಚಿವರು, ಶಾಸಕರು ಅಭಿನಂದಿಸಿದರು.



