ಬೆಂಗಳೂರು; ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸವಾಗಿದ್ದ ಗಣಿ-ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ನಿನ್ನೆ (ನ.4) ರಾತ್ರಿ ಘಟನೆ ಡೆದಿದ್ದು, ಪ್ರತಿಮಾ ಕೊಲೆಯಾದ ಮಹಿಳಾ ಅಧಿಕಾರಿ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ತಿರ್ಥಹಳ್ಳಿ ಮೂಲದ ಅಧಿಕಾರಿ ಪ್ರತಿಮಾ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸವಿದ್ದರು. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಚಾಲಕ ಕಚೇರಿಯಿಂದ ಮನೆಗೆ ಬಿಟ್ಟು ಬಂದಿದ್ದ. ಇಂದು ಬೆಳಿಗ್ಗೆ ಪ್ರತಿಮಾ ಅವರ ಅಣ್ಣ ಕರೆ ಮಾಡಿದಾಗ ಸ್ವೀಕರಿಸಿಲ್ಲ ಎನ್ನಲಾಗಿದೆ. ಬೆಳಿಗ್ಗೆ ಮನೆ ಬಳಿ ಹೋಗಿ ನೋಡಿದಾಗ ಕೊಲೆಯಾಗಿರುವುದು ಗೊತ್ತಾಗಿದೆ.
ಉದ್ದೇಶಪೂರ್ವಕ ಕೊಲೆ ನಡೆದಿದೆ ಎಂಬ ಅನುಮಾನ ಹುಟ್ಟಿಕೊಂಡಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



