Connect with us

Dvgsuddi Kannada | online news portal | Kannada news online

ಅತೀ ಶೀಘ್ರದಲ್ಲಿಯೇ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಮತ್ತೆ ಚಾಲನೆ: ಕಂದಾಯ ಸಚಿವ ಕೃಷ್ಣಭೈರೇಗೌಡ‌

ಪ್ರಮುಖ ಸುದ್ದಿ

ಅತೀ ಶೀಘ್ರದಲ್ಲಿಯೇ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಮತ್ತೆ ಚಾಲನೆ: ಕಂದಾಯ ಸಚಿವ ಕೃಷ್ಣಭೈರೇಗೌಡ‌

ಮೈಸೂರು: ರಾಜ್ಯದಲ್ಲಿ ಶೀಘ್ರವೇ ಜಮೀನಿನ ಮಾಲೀಕತ್ವಕ್ಕೆ ನೆಮ್ಮದಿಯ ಗ್ಯಾರಂಟಿ ನೀಡುವ ಉದ್ದೇಶದಿಂದ ಮತ್ತೆ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ರಾಜ್ಯದಲ್ಲಿ 22 ಲಕ್ಷ ಖಾಸಗಿ ಆರ್‌ಟಿಸಿ ಗಳಿಗೆ ಪೋಡಿ ಆಗಿಲ್ಲ. ಪ್ರತಿಯೊಂದು ಆರ್‌ಟಿಸಿಯಲ್ಲಿ ಮೂರು ರಿಂದ ನಾಲ್ಕು ಜನ ಆರ್‌ಟಿಸಿ ಮಾಲೀಕರು ಇರುತ್ತಾರೆ. ಈ ಜಮೀನುಗಳ ಪೋಡಿ ಆಗಿಲ್ಲ. ಇನ್ನೂ ಸರ್ಕಾರಿಂದ ಭೂ ಮಂಜೂರಾದವ ಜಮೀನುಗಳೂ ಪೋಡಿ ಆಗಿಲ್ಲ. ಹೀಗಾಗಿ ಪೋಡಿ ಮುಕ್ತ ಅಭಿಯಾನದ ಅಡಿಯಲ್ಲಿ ಇಂತಹ ಜನರನ್ನು ನಾವೇ ಗುರುತಿಸಿ ಸರ್ಕಾರದಿಂದ ನಾವೇ ಪೋಡಿ ಮಾಡಿಕೊಡಲಿದ್ದೇವೆ ಎಂದರು.

ಬಡವರಿಗೆ ಅನುಕೂಲ ಮಾಡಲು ಪೋಡಿ ಮುಕ್ತ ಗ್ರಾಮಗಳ ಯೋಜನೆ ಜಾರಿಗೆ ತರಲಾಗಿದೆ. ಆಯವ್ಯಯದಲ್ಲಿ ಘೋಷಿಸಿದಂತೆ ಪೋಡಿಮುಕ್ತ ಅಭಿಯಾನಕ್ಕೆ ಮತ್ತೆ ಶೀಘ್ರವೇ ಚಾಲನೇ ನೀಡಲಾಗುವುದು ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top