Connect with us

Dvgsuddi Kannada | online news portal | Kannada news online

ವಾಹನಗಳಿಗೆ HSR ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ಒಂದು ವಾರ ಮಾತ್ರ ಬಾಕಿ…!!!; ಫೆ.18 ನಂತರ ದಂಡನಾ…..?

ಪ್ರಮುಖ ಸುದ್ದಿ

ವಾಹನಗಳಿಗೆ HSR ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ಒಂದು ವಾರ ಮಾತ್ರ ಬಾಕಿ…!!!; ಫೆ.18 ನಂತರ ದಂಡನಾ…..?

ದಾವಣಗೆರೆ: 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ (ಎಚ್ ಎಸ್ ಆರ್ ಪಿ) ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಿದೆ. ಎಚ್‌ಎಸ್‌ಆರ್‌ಪಿ ಅಳವಡಿಕೆ ನೀಡಲಾಗಿದ್ದ ಗಡುವು ಇನ್ನೊಂದು ವಾರದಲ್ಲಿ ಮುಗಿಯಲಿದೆ. ಆದರೆ, ನಿಗದಿಯಷ್ಟು ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಕೆ ಮಾಡಿಕೊಂಡಿಲ್ಲದ ಕಾರಣ ಮತ್ತೊಮ್ಮೆ ಗಡುವು ವಿಸ್ತರಿಸಬಹುದೇ ಎಂಬ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳು ಚರ್ಚಿಸುತ್ತಿದ್ದಾರೆ. ಒಂದು ವೇಳೆ ಗಡುವು ವಿಸ್ತರಿಸದಿದ್ದರೆ ಫೆ. 18ರಿಂದ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳದ ವಾಹನಗಳಿಗೆ ದಂಡ ವಿಧಿಸಲಾಗುತ್ತದೆ. ವಾಹನಗಳಿಗೆ 1 ಸಾವಿರ ರು.ನಿಂದ 2 ಸಾವಿರ ರು.ವರೆಗೆ ದಂಡ ವಿಧಿಸುವ ಸಾಧ್ಯತೆಗಳಿವೆ

2019ರ ಏಪ್ರಿಲ್ 1 ಕ್ಕಿಂತ ಮೊದಲು ನೋಂದಯಿಸಿದ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ವಾಹನ ಮಾಲೀಕರು ಆನ್‍ಲೈನ್ ವೆಬ್‍ಸೈಟ್ www.siam.in, hsrp karnataka, book my hsrp ಮತ್ತು book my hsrp ಗೆ ಭೇಟಿ ನೀಡಿ ನೋಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಿಕೊಳ್ಳಬೇಕು.

ಸಾರಿಗೆ ಇಲಾಖೆ ಮಾಹಿತಿಯಂತೆ ರಾಜ್ಯದಲ್ಲಿ 2 ಕೋಟಿಗೂ ಹೆಚ್ಚಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕಿದ್ದು, 2023ರ ನ. 17ರವರೆಗೆ ಕೇವಲ 40 ಸಾವಿರ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಕೆ ಮಾಡಿಕೊಂಡಿದ್ದವು. ಹೀಗಾಗಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಅಂತಿಮ ದಿನವನ್ನು 2024ರ ಫೆ. 17ಕ್ಕೆ ವಿಸ್ತರಿಸಲಾಗಿತ್ತು. ಹೀಗೆ ಎರಡನೇ ಬಾರಿ ಗಡುವು ವಿಸ್ತರಿಸಿದರೂ ವಾಹನ ಮಾಲೀಕರು ಎಚ್‌ಎಸ್‌ಆರ್‌ಪಿ ಅಳವಡಿಕೆ ಮುಂದಾಗಿಲ್ಲ.

ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.siam.in/hrspsubmit.aspx?mpgid=91&pgidtrail=91 ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ, ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ಕೆ ಮಾಡಿಕೊಳ್ಳಬೇಕು. ಕಾಯ್ದಿರಿಸಿದ ಸಮಯಕ್ಕೆ ಸರಿಯಾಗಿ ಹೋಗಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬಹುದು. ಇದಲ್ಲದೇ ಮನೆಗೆ ಕರೆಸಿಕೊಳ್ಳಲು ಅವಕಾಶವೂ ಸಹ ಇದೆ.

ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top