Connect with us

Dvgsuddi Kannada | online news portal | Kannada news online

ಅರಣ್ಯ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು

ಪ್ರಮುಖ ಸುದ್ದಿ

ಅರಣ್ಯ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು

ಬೆಂಗಳೂರು: ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.

ನಗರದ ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಟುಂಬದ ಸದಸ್ಯರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ತಡ ರಾತ್ರಿ ಕೊನೆಯುಸಿರೆಳೆದರು.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ‌ ಅವರ ಅಗಲಿಕೆಯಿಂದಾಗಿ ಉತ್ತರ ಕರ್ನಾಟಕದ ಜನಪರ ಧ್ವನಿಯೊಂದು ಶಾಂತವಾದಂತಾಗಿದೆ.

1985ರಲ್ಲಿ ರಾಜಕೀಯ ಪ್ರವೇಶ ಮಾಡಿದ ಉಮೇಶ್‌ ಕತ್ತಿ 8 ಬಾರಿ ಶಾಸಕರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ಅರಣ್ಯ ಇಲಾಖೆ ಸಚಿವರಾಗಿದ್ದಾರೆ.

8 ಬಾರಿ ಶಾಸಕರಾಗಿರುವ ಉಮೇಶ್‌ ಕತ್ತಿ ಆರು ಬಾರಿ ಪಕ್ಷವನ್ನು ಬದಲಾವಣೆ ಮಾಡಿದ್ದಾರೆ. 2004ರ ಚುನಾವಣೆಯಲ್ಲಿ 821 ಮತಗಳ ಅಂತರದಿಂದ ಒಂದು ಬಾರಿ ಮಾತ್ರ ಉಮೇಶ್ ಕತ್ತಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top