ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ನಗರದ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಹೋಟೆಲ್ ಗೆ ಬಂದು, ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸರಳ ವಾಸ್ತು ಸಲಹೆ ಮೂಲಕ ಚಂದ್ರಶೇಖರ್ ಗುರೂಜಿ ಚಿರಪರಿಚಿತರಾಗಿದ್ದರು. ಸರಳ ವಾಸ್ತು ಹೆಸರಿನಲ್ಲಿ ಟಿವಿ ಕಾರ್ಯಕ್ರಮ ನಡೆಸುವ ನಡೆಸುತ್ತಿದ್ದರು. ಇಂದು ಬೆಳಗ್ಗೆ ಈ ಘಟನೆ ನಡೆದಿದೆ.
ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್ ಲಾಬೂರಾಮ್ ಆಗಮಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಹೋಟೆಲ್ ನಲ್ಲಿ ಚಾಕು ಇರಿದು ಹಂತಕರು ಪರಾರಿಯಾಗಿದ್ದಾರೆ.